ಕಾಂಗ್ರೆಸ್‌ ಸರ್ಕಾರ ತೊಲಗಿಸಲು ಪಕ್ಷ ಬಲಪಡಿಸಬೇಕು: ಡಿ.ಎಸ್‌. ಅರುಣ್‌

KannadaprabhaNewsNetwork |  
Published : Aug 30, 2024, 01:05 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರವನ್ನು ವಿಧಾನಪರಿಷತ್‌ ಸದಸ್ಯ ಡಿ.ಎಸ್‌. ಅರುಣ್‌ ಅವರು ಉದ್ಘಾಟಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ, ಡಾ. ನರೇಂದ್ರ, ಪುಣ್ಯಪಾಲ್‌, ರವೀಂದ್ರ ಬೆಳವಾಡಿ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ ಸದೃಢ ಬಿಜೆಪಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಸದಸ್ಯತ್ವ ಅಭಿಯಾನ ಕೈಗೊಂಡು ಪಕ್ಷದ ರಾಜ್ಯಾಧ್ಯಕ್ಷರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಚಿಕ್ಕಮಗಳೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ ಸದೃಢ ಬಿಜೆಪಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಸದಸ್ಯತ್ವ ಅಭಿಯಾನ ಕೈಗೊಂಡು ಪಕ್ಷದ ರಾಜ್ಯಾಧ್ಯಕ್ಷರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಿಂತ ನೀರಾಗದೇ ನಿರಂತರ ಚಟುವಟಿಕೆ ಕೂಡಿರುವ ಕಾಯಕವಾಗಬೇಕು ಎಂದು ಕರೆ ನೀಡಿದರು.

ಕಾರ್ಯಕರ್ತರು ಪರಸ್ಪರ ಭಾವನಾತ್ಮಕ ಸಂಬಂಧ ಬೆಳೆಸಿಕೊಳ್ಳಬೇಕು, ಆಗ ಮಾತ್ರ ಪಕ್ಷ ಪ್ರತಿ ಹಂತದಲ್ಲೂ ಬೆಳವಣಿಗೆ ಹೊಂದಲು ಸಾಧ್ಯ. ಬಿಜೆಪಿ ಯಾರೊಬ್ಬರ ಸ್ವತ್ತಲ್ಲ, ಪ್ರತಿಯೊಬ್ಬ ಕಾರ್ಯಕರ್ತರ ಸ್ವತ್ತು. ಹೀಗಾಗಿ ದೃತಿಗೆಡದೇ ಕಾರ್ಯ ಕರ್ತರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ, ಅತಿ ಹೆಚ್ಚು ಸಂಖ್ಯೆಯಲ್ಲಿ ಸದಸ್ಯತ್ವ ನೊಂದಾಯಿಸಲು ಮುಂದಾಗಬೇಕು ಎಂದರು.

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಸಮಯ ವ್ಯರ್ಥಗೊಳಿಸದೇ ರಾಜ್ಯಾದ್ಯಂತ ಹೋರಾಟ ರೂಪಿಸುತ್ತಿದ್ದಾರೆ. ಸದ್ಯದಲ್ಲೇ ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಕೆಳಗಿಳಿಸುವುದು ನಿಶ್ಚಿತ. ಯಾವುದೇ ಸಂದೇಹವಿಲ್ಲ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಪಕ್ಷದ ಸೈದ್ದಾಂತಿಕ ನಿಲುವಿನಡಿ ಕಾರ್ಯಕರ್ತರು ನಗರ ಸೇರಿದಂತೆ ಗ್ರಾಮಮಟ್ಟದಲ್ಲಿ ಅಭಿಯಾನಕ್ಕಾಗಿ ನೇಮಿಸಿರುವ ಸಂಚಾಲಕರ ಸೂಚನೆ ಮೇರೆಗೆ ಪ್ರತಿ ಮನೆಗಳಿಗೆ ಭೇಟಿ ಕೊಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಪ್ರಜ್ವಲಿಸುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸುವ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅತಿಥಿ ಶಿಕ್ಷಕರಿಗೆ ಮೆಡಿಕಲ್ ಸೌಲಭ್ಯ, ಕಾಯಂಗೊಳಿಸುವಿಕೆ ಸೇರಿದಂತೆ ಇನ್ನಿತರೆ ಸೌಲಭ್ಯ ಗಳಿಂದ ವಂಚಿತಗೊಳಿಸಿದೆ ಎಂದು ದೂರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ಶೆಟ್ಟಿ ಮಾತನಾಡಿ, ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯ ಕರ್ತರ ಶ್ರಮ ಬಹಳಷ್ಟಿದೆ. ಹೀಗಾಗಿ ಅಭಿಯಾನ ಸದಸ್ಯತ್ವದಲ್ಲಿ ಜಿಲ್ಲೆಯ ಪ್ರತಿ ತಾಲೂಕು, ಹೋಬಳಿ ಹಾಗೂ ಗ್ರಾಮದಲ್ಲಿ ಪಕ್ಷ ಸಂಘಟಿಸಿ ಸದಸ್ಯತ್ವ ನೋಂದಣಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಅಭಿಯಾನದ ಸಮಿತಿ ಸಂಚಾಲಕರಾಗಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ನರೇಂದ್ರ, ರವೀಂದ್ರ ಬೆಳವಾಡಿ, ಪುಣ್ಯಪಾಲ್, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರಾಗಿ ವೀಣಾಶೆಟ್ಟಿ, ಸವಿತಾ ರಮೇಶ್, ರತನ್ ಅವರನ್ನು ನೇಮಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲೆಯ ಎಲ್ಲಾ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಮುಖಂಡರು, ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.ಪೋಟೋ ಫೈಲ್‌ ನೇಮ್‌ 29 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ವಿಧಾನಪರಿಷತ್‌ ಸದಸ್ಯ ಡಿ.ಎಸ್‌. ಅರುಣ್‌ ಅವರು ಉದ್ಘಾಟಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ, ಡಾ. ನರೇಂದ್ರ, ಪುಣ್ಯಪಾಲ್‌, ರವೀಂದ್ರ ಬೆಳವಾಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ