2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ವಿಧಾನ ಪರಿಷತ್ ಸದಸ್ಯರಿಗೆ ಕ್ಷೇತ್ರವಾರು ಜವಾಬ್ದಾರಿ ವಹಿಸಿದೆ.
ಹುಬ್ಬಳ್ಳಿ:
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ವಿಧಾನ ಪರಿಷತ್ ಸದಸ್ಯರಿಗೆ ಕ್ಷೇತ್ರವಾರು ಜವಾಬ್ದಾರಿ ವಹಿಸಿದೆ. ಅದರಂತೆ ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ್‌ಗೆ ನೀಡಲಾಗಿದೆ.
ಕೆಪಿಸಿಸಿ ಸೆ. 25ರಂದು ಹೊರಡಿಸಿರುವ ಕ್ಷೇತ್ರವಾರು ಜವಾಬ್ದಾರಿ ಪಟ್ಟಿಯಲ್ಲಿ ನಾಮನಿರ್ದೇಶಿತ ಸದಸ್ಯರಾಗಿರುವ ಜಕ್ಕಪ್ಪನವರ್ ಅವರಿಗೆ ಈ ಎರಡೂ ಕ್ಷೇತ್ರಗಳ ಜವಾಬ್ದಾರಿ ನೀಡಲಾಗಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿರುವ ಈ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುವುದು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಸರ್ಕಾರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳ ಮಾಹಿತಿ ಜನರಿಗೆ ತಲುಪಿಸುವುದು ಅವರ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ.
ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುವುದು ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ಪಡೆದು ಪಕ್ಷದ ಸಂಘಟನೆಯೊಂದಿಗೆ ಸಮನ್ವಯ ಸಾಧಿಸುವ ಕಾರ್ಯಕ್ಕೂ ಒತ್ತು ನೀಡಲಾಗಿದೆ.
ಸಲೀಂ ಅಹ್ಮದ್ ಹೆಸರೂ ಪಟ್ಟಿಯಲ್ಲಿ:
ಇದೇ ವೇಳೆ ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಭಾಪತಿ ಸಲೀಂ ಅಹ್ಮದ್ ಅವರ ಹೆಸರೂ ಪಟ್ಟಿಯಲ್ಲಿದೆ. ಆದರೆ, ಅವರು ಸದ್ಯ ಸಭಾಪತಿಯಾಗಿರುವ ಕಾರಣ ಅವರಿಗೆ ಯಾವುದೇ ಕ್ಷೇತ್ರದ ಜವಾಬ್ದಾರಿ ನೀಡಿಲ್ಲ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.