ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಇದಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ದೇಶಾದ್ಯಂತ ವೋಟ್ ಚೋರಿ ಎಂದು ಆರೋಪಿಸುತ್ತಿದ್ದಾರೆ. ಆದರೆ, ಹಾವೇರಿಯಲ್ಲಿ ನಡೆದಿರುವ ಘಟನೆ ಕಾಂಗ್ರೆಸ್‌ನ ಮತದಾನ ಪ್ರಕ್ರಿಯೆಯ ಬಗ್ಗೆಯೇ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ದೃಶ್ಯಾವಳಿ ಮತ್ತು ಮತದಾರರ ಪಟ್ಟಿಯ ಮಾಹಿತಿಯನ್ನು ನಿಮ್ಮ ಮುಂದಿಟ್ಟಿದ್ದೇವೆ. ಆಶಾ ಪಾಟೀಲ ಮತದಾನಕ್ಕೆ ಬಾರದಿದ್ದರೂ, ಅವರ ಹೆಸರಿನಲ್ಲಿ ಬೇರೊಬ್ಬರು ಮತ ಚಲಾಯಿಸಿರುವ ಆರೋಪ ಕೇಳಿಬಂದಿದೆ ಎಂದರು.
ಮತಗಟ್ಟೆ ಸಂಖ್ಯೆ 85ರಲ್ಲಿ ನಡೆದಿರುವ ಮತದಾನ ಪ್ರಕ್ರಿಯೆಯನ್ನು ಗಮನಿಸಿದಾಗ, ಮತದಾರರ ಗುರುತಿನ ಚೀಟಿ ಪರಿಶೀಲನೆ ಸಮರ್ಪಕವಾಗಿ ನಡೆದಿದೆಯೇ ಎಂಬ ಅನುಮಾನ ಮೂಡುತ್ತದೆ. ಮತದಾರರ ಗುರುತನ್ನು ಖಚಿತಪಡಿಸಿಕೊಳ್ಳದೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆಯೇ ಎಂಬುದರ ಕುರಿತು ಚುನಾವಣಾಧಿಕಾರಿಗಳು ತನಿಖೆ ನಡೆಸಬೇಕು. ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಪಾತ್ರವನ್ನೂ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.ಸಚಿವ ರುದ್ರಪ್ಪ ಲಮಾಣಿ ಮತ ಚಲಾಯಿಸುವ ಸಂದರ್ಭದಲ್ಲಿ ಶಿಲ್ಪಾ ಬಡಮ್ಮನವರ್ ಸರತಿ ಸಾಲಿನಲ್ಲಿ ಇದ್ದರು. ಬಳಿಕ ಮತಗಟ್ಟೆಯೊಳಗೆ ನಡೆದ ಮತದಾನ ಪ್ರಕ್ರಿಯೆಗೆ ಸಂಬಂಧಿಸಿದ ದೃಶ್ಯಾವಳಿಗಳನ್ನು ನಾವು ಪರಿಶೀಲನೆಗೆ ಮುಂದಿಟ್ಟಿದ್ದೇವೆ. ಆಶಾ ಪಾಟೀಲ ಹೆಸರಿನಲ್ಲಿ ಮತ ಚಲಾವಣೆಯಾಗಿರುವ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಿ ಸತ್ಯಾಂಶ ಹೊರತರುವ ಅಗತ್ಯವಿದೆ ಎಂದರು.
ಚುನಾವಣೆಯಲ್ಲಿ ಅಕ್ರಮ ನಡೆದಿರುವ ಆರೋಪವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ಚುನಾವಣಾ ಆಯೋಗಕ್ಕೆ ಲಿಖಿತ ದೂರು ಸಲ್ಲಿಸುತ್ತೇವೆ. ಮತಗಟ್ಟೆ ಸಂಖ್ಯೆ 85ರಲ್ಲಿ ನಡೆದಿರುವ ಪ್ರಕ್ರಿಯೆಯ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.