ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಜನಸೇವೆಮಾಡಿ: ನಾಗರಾಜು

KannadaprabhaNewsNetwork |  
Published : Nov 06, 2026, 01:30 AM IST
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀðರಾಗಿ ಜನಸೇವೆಮಾಡಿ : ಯ. ನಾಗರಾಜು | Kannada Prabha

ಸಾರಾಂಶ

ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗುವುದರ ಮೂಲಕ ನಾಗರಿಕ ಸಮಾಜಕ್ಕೆ ಉತ್ತಮ ಅಧಿಕಾರಿಗಳಾಗಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು. ನಮ್ಮ ಕೃಷಿ ಸರ್ವೋದಯ ಫೌಂಡೇಶನ್ ತಿಪಟೂರಿನಲ್ಲಿ ಶಾಖೆಯನ್ನು ತೆರೆದು ಹಳ್ಳಿಗಾಡಿನ ಬಡ ಆರ್ಥಿಕವಾಗಿ ಹಿಂದುಳಿದವರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡುವುದರ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತೇವೆ.

ಕನ್ನಡಪ್ರಭವಾರ್ತೆ ತಿಪಟೂರು

ತುಮಕೂರು ಕೃಷಿಕ್ ಸರ್ವೋದಯ ಫೌಂಡೇಶನ್ ಹಾಗೂ ತಿಪಟೂರು ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶಯದಲ್ಲಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಉದ್ಘಾಟನೆಯನ್ನು ಗುರು ಫೌಂಡೇಶನ್ ಅಧ್ಯಕ್ಷರಾದ ಆಡಿಟರ್ ನಾಗರಾಜ್ ಯಲಚವಾಡಿ ಉದ್ಘಾಟಿಸಿ ಮಾತನಾಡುತ್ತಾ, ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗುವುದರ ಮೂಲಕ ನಾಗರಿಕ ಸಮಾಜಕ್ಕೆ ಉತ್ತಮ ಅಧಿಕಾರಿಗಳಾಗಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು. ನಮ್ಮ ಕೃಷಿ ಸರ್ವೋದಯ ಫೌಂಡೇಶನ್ ತಿಪಟೂರಿನಲ್ಲಿ ಶಾಖೆಯನ್ನು ತೆರೆದು ಹಳ್ಳಿಗಾಡಿನ ಬಡ ಆರ್ಥಿಕವಾಗಿ ಹಿಂದುಳಿದವರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡುವುದರ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತೇವೆಂದು ತಿಳಿಸಿದರು.

ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ಡಾ. ರಾಮಚಂದ್ರ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯುವಪೀಳಿಗೆ ಗಂಭೀರವಾಗಿ ಪರಿಗಣಿಸಿ ಕಠಿಣ ಶ್ರಮದಿಂದ ಅಭ್ಯಾಸ ಮಾಡಬೇಕು. ದಿನದ ಪತ್ರಿಕೆಗಳಿಂದ ಮಾಹಿತಿ ಸಂಗ್ರಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕೆಂದು ತಿಳಿಸಿದರು.

ಅಧ್ಯಕ್ಷತೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಚ್.ಸಿ. ಶಶಿಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಫೌಂಡೇಶನ್ ನಿರ್ದೇಶಕರಾದ ಎಸ್. ಚಿದಾನಂದ, ಕಾರ್ಯದರ್ಶಿ ಹನುಮೇಗೌಡ, ಸಂಯೋಜಕ ಡಾ. ಗುರುರಾಜು, ಸಂಪನ್ಮೂಲ ವ್ಯಕ್ತಿ ಸಿ. ಚೇತನ್ ಕುಮಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳಸಿದ ಕಪ್‌ನಲ್ಲೇ ಪೆಪ್ಸಿ ಸರ್ವ್‌ ಮಾಡಿದ ಪಿವಿಆರ್ ತಿನಿಸು ಮಳಿಗೆ
ಬಿಎಂಟಿಸಿ ಬಸ್‌ ಪಾಸ್‌ ದರ ಹೆಚ್ಚಳ!