ರೈಲ್ವೆ ಸಿಬ್ಬಂದಿ ವಿರುದ್ಧ ಪ್ರಯಾಣಿಕರ ಆಕ್ರೋಶ

KannadaprabhaNewsNetwork |  
Published : Nov 09, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಕಡೂರು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಸ್ವಯಂ ಚಾಲಿತ ಟಿಕೆಟ್ ವಿತರಣಾ ಯಂತ್ರದ ಮೂಲಕ ಟಿಕೆಟ್ ಪಡೆದ ಪ್ರಯಾಣಿಕರು, ರೈಲು ತಪ್ಪಿದ ಹಿನ್ನೆಲೆಯಲ್ಲಿ ಟಿಕೆಟ್ ರದ್ದುಪಡಿಸಿ ಹಣ ವಾಪಸ್ ಪಡೆಯಲು ಮುಂದಾದಾಗ ಸಿಬ್ಬಂದಿ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ರೈಲ್ವೆ ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆದಿದೆ.

ಕಡೂರು ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ರದ್ದುಪಡಿಸಿ ಹಣ ವಾಪಸ್‌ಗೆ ನಿರಾಕರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕಡೂರು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಸ್ವಯಂ ಚಾಲಿತ ಟಿಕೆಟ್ ವಿತರಣಾ ಯಂತ್ರದ ಮೂಲಕ ಟಿಕೆಟ್ ಪಡೆದ ಪ್ರಯಾಣಿಕರು, ರೈಲು ತಪ್ಪಿದ ಹಿನ್ನೆಲೆಯಲ್ಲಿ ಟಿಕೆಟ್ ರದ್ದುಪಡಿಸಿ ಹಣ ವಾಪಸ್ ಪಡೆಯಲು ಮುಂದಾದಾಗ ಸಿಬ್ಬಂದಿ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ರೈಲ್ವೆ ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಭಾನುವಾರ ನಡೆದಿದೆ.ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿರುವ ಸ್ವಯಂ ಚಾಲಿತ ಟಿಕೆಟ್ ವಿತರಣಾ ಯಂತ್ರದ ಮೂಲಕ ಪ್ರಯಾಣದ ಟಿಕೆಟ್‌ ಗಳನ್ನು ಖರೀದಿಸಿದ್ದರು. ಆದರೆ, ವಿವಿಧ ಕಾರಣಗಳಿಂದ ನಿಗದಿತ ಸಮಯಕ್ಕೆ ರೈಲ್ವೆ ನಿಲ್ದಾಣಕ್ಕೆ ತಲುಪಲು ಸಾಧ್ಯವಾಗದೆ ರೈಲು ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಪ್ರಯಾಣ ಮಾಡದ ಹಿನ್ನೆಲೆಯಲ್ಲಿ ಖರೀದಿಸಿದ್ದ ಟಿಕೆಟ್‌ಗಳನ್ನು ರದ್ದುಪಡಿಸಿ, ನಿಯ ಮಾನುಸಾರ ಹಣವನ್ನು ಮರಳಿ ನೀಡುವಂತೆ ಟಿಕೆಟ್ ಕೌಂಟರ್‌ನಲ್ಲಿದ್ದ ಸಿಬ್ಬಂದಿಗೆ ಮನವಿ ಮಾಡಿದ್ದಾರೆ.ಆದರೆ, ಸ್ವಯಂ ಚಾಲಿತ ಟಿಕೆಟ್ ಯಂತ್ರದಲ್ಲಿ ವಿತರಿಸಲಾದ ಟಿಕೆಟ್‌ಗಳನ್ನು ಕೌಂಟರ್‌ನಲ್ಲಿ ರದ್ದುಪಡಿಸಲು ಸಾಧ್ಯವಿಲ್ಲ. ಅಂತಹ ಟಿಕೆಟ್‌ಗಳನ್ನು ರದ್ದುಪಡಿಸಿ ಹಣ ಮರುಪಾವತಿಗೆ ಅವಕಾಶವಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ.ಟಿಕೆಟ್ ಖರೀದಿಸಲು ಯಂತ್ರದಲ್ಲಿ ವ್ಯವಸ್ಥೆ ಕಲ್ಪಿಸಿರುವ ರೈಲ್ವೆ ಇಲಾಖೆ, ಅನಿವಾರ್ಯ ಕಾರಣಗಳಿಂದ ಪ್ರಯಾಣಿಸಲು ಸಾಧ್ಯ ವಾಗದ ಸಂದರ್ಭದಲ್ಲಿ ಟಿಕೆಟ್ ರದ್ದತಿ ಮತ್ತು ಹಣ ಮರುಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದು ಯಾವ ನ್ಯಾಯ ಎಂಬ ಪ್ರಶ್ನೆಯನ್ನು ಪ್ರಯಾಣಿಕರು ಎತ್ತಿದ್ದಾರೆ.ಸಾಮಾನ್ಯ ಪ್ರಯಾಣಿಕರು ರೈಲ್ವೆ ನಿಲ್ದಾಣಕ್ಕೆ ಬಂದು ಟಿಕೆಟ್ ಖರೀದಿಸುವಾಗ ಸ್ವಯಂ ಚಾಲಿತ ಯಂತ್ರ ಬಳಸುವಂತೆ ಉತ್ತೇಜಿಸಲಾಗುತ್ತಿದೆ. ಆದರೆ, ಟಿಕೆಟ್ ರದ್ದತಿ ವಿಚಾರದಲ್ಲಿ ಮಾತ್ರ ಸಿಬ್ಬಂದಿ ನಿರಾಕರಿಸುತ್ತಿರುವುದು ಪ್ರಯಾಣಿಕರಿಗೆ ತೊಂದರೆಯಾಗಿದೆ. ಟಿಕೆಟ್ ಖರೀದಿಗೆ ಸುಲಭ ವ್ಯವಸ್ಥೆ ಕಲ್ಪಿಸುವ ರೈಲ್ವೆ ಇಲಾಖೆ, ರದ್ದತಿ ಹಾಗೂ ಮರುಪಾವತಿ ವಿಚಾರ ದಲ್ಲಿಯೂ ಸ್ಪಷ್ಟ ಮಾರ್ಗಸೂಚಿ ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವ ವ್ಯವಸ್ಥೆ ರೂಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

-- ಬಾಕ್ಸ್-- ರೈಲ್ವೆ ಇಲಾಖೆ ಸ್ಪಷ್ಟನೆ ನೀಡಲಿ:

ಸ್ವಯಂ ಚಾಲಿತ ಟಿಕೆಟ್ ಯಂತ್ರದಲ್ಲಿ ಪಡೆದ ಟಿಕೆಟ್‌ಗಳನ್ನು ಯಾವ ಸಂದರ್ಭಗಳಲ್ಲಿ ರದ್ದುಪಡಿಸಬಹುದು. ಹಣ ಮರು ಪಾವತಿಗೆ ಇರುವ ನಿಯಮಗಳೇನು ಮತ್ತು ಅದಕ್ಕಾಗಿ ಪ್ರಯಾಣಿಕರು ಯಾರನ್ನು ಸಂಪರ್ಕಿಸಬೇಕು ಎಂಬ ಕುರಿತು ಕಡೂರು ರೈಲ್ವೆ ನಿಲ್ದಾಣದ ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಬೇಕು ಎಂಬುದು ಪ್ರಯಾಣಿಕರ ಆಗ್ರಹವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ