ಸೋಲು,ಗೆಲುವಿಗಿಂತ ಕ್ರೀಡೆಯಲ್ಲಿ ಉತ್ಸಾಹ ಮುಖ್ಯ

KannadaprabhaNewsNetwork |  
Published : Sep 22, 2024, 01:59 AM IST
ಕ್ರೀಡೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಂಘಟಿತ ಕಾರ್ಯ ಹಾಗೂ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಅಂತಹ ಯಶಸ್ವಿ ಕಾರ್ಯಕ್ರಮಗಳನ್ನು ಆದರ್ಶ ಶಿಕ್ಷಕರ ವೇದಿಕೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಸಂಘಟಿತ ಕಾರ್ಯ ಹಾಗೂ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಅಂತಹ ಯಶಸ್ವಿ ಕಾರ್ಯಕ್ರಮಗಳನ್ನು ಆದರ್ಶ ಶಿಕ್ಷಕರ ವೇದಿಕೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಸಂಜೆ ಆದರ್ಶ ಶಿಕ್ಷಕರ ವೇದಿಕೆಯ ತಾಲೂಕು ಘಟಕ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಸವನಬಾಗೇವಾಡಿ ಅಖಂಡ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರಿಕೆಟ್ ಟೂರ್ನಮೆಂಟ್‌ಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆ ಉತ್ಸಾಹವನ್ನು ಇಮ್ಮಡಿಗೊಳಿಸುತ್ತದೆ. ಶಿಕ್ಷಕರು ಮಕ್ಕಳಿಗೆ ಆಟಗಳನ್ನು ಆಡಿಸುವುದರೊಂದಿಗೆ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿರುವುದು ಇತರರಿಗೆ ಕ್ರೀಡಾಸಕ್ತಿ ಹೆಚ್ಚಲು ಪ್ರೇರಣೆಯಾಗಲಿದೆ ಎಂದು ಹೇಳಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಮಾತನಾಡಿ, ಶಿಕ್ಷಕರು ತಮ್ಮ ಕರ್ತವ್ಯದ ಒತ್ತಡದ ಮಧ್ಯೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದು ಉತ್ತಮ. ಅರ್ಜಿ ಸಲ್ಲಿಸಿ ಪ್ರಶಸ್ತಿ ಪಡೆಯುವ ಕಾಲದಲ್ಲಿ ಆದರ್ಶ ಶಿಕ್ಷಕರ ವೇದಿಕೆ ಉತ್ತಮ ಶಾಲೆ, ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಎಲ್ಲವನ್ನು ಗಳಿಸಿ ಆರೋಗ್ಯ ಹಾಳು ಮಾಡಿಕೊಂಡರೆ ಜೀವನ ವ್ಯರ್ಥ. ಕಳೆದ ವಸ್ತುಗಳನ್ನು ಮರಳಿ ಪಡೆಯಬಹುದು. ಕ್ರೀಡೆಗಳು ಆರೋಗ್ಯ ವೃದ್ಧಿಸುವುದರೊಂದಿಗೆ ಚೈತನ್ಯ ಹೆಚ್ಚಿಸುತ್ತದೆ ಎಂದು ಹೇಳಿದರು.ಹುಣಶ್ಯಾಳ ಪಿ.ಬಿಯ ಆನಂದ ದೇವರು, ಆದರ್ಶ ಶಿಕ್ಷಕರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ ಕವಲಗಿ ಮಾತನಾಡಿದರು.

ಮುಖಂಡರಾದ ಬಿ.ಕೆ.ಕಲ್ಲೂರ, ಸಂಗನಗೌಡ ಚಿಕ್ಕೊಂಡ, ಶೇಖರ ಗೊಳಸಂಗಿ, ಸುರೇಶ ಹಾರಿವಾಳ, ರವಿಗೌಡ ಚಿಕ್ಕೊಂಡ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ, ಆದರ್ಶ ಶಿಕ್ಷಕರ ವೇದಿಕೆಯ ತಾಲೂಕು ಅಧ್ಯಕ್ಷ ಎಂ.ಎನ್.ಯಾಳವಾರ, ಉಪಪ್ರಾಚಾರ್ಯ ರಮೇಶ ಪೂಜಾರಿ, ಎಸ್.ಜಿ.ಪಾಟೀಲ, ಹೊನ್ನಪ್ಪ ಗೊಳಸಂಗಿ, ಆರ್.ಎಸ್.ಕಮತ, ಸಲೀಂ ದಡೇದ, ಸುರೇಶ ಸಜ್ಜನ, ಬಿ.ಎಸ್.ಅವಟಿ, ಸಿದ್ದಪ್ಪ ಅವಜಿ, ಆರ್.ಜಿ.ಅಳ್ಳಗಿ ಇದ್ದರು. ಎಚ್.ಬಿ.ಬಾರಿಕಾಯಿ ಸ್ವಾಗತಿಸಿದರು, ಕೊಟ್ರೇಶ ಹೆಗಡ್ಯಾಳ ನಿರೂಪಿಸಿದರು, ಬಿ.ವಿ.ಚಕ್ರಮನಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು