ಭಾರತ ಅಭಿವೃದ್ಧಿಗೆ ಪಟೇಲ್‌ ಕೊಡುಗೆ ಅಪಾರ

KannadaprabhaNewsNetwork |  
Published : Nov 01, 2025, 01:30 AM IST
ಹೊನ್ನಾಳಿ ಫೋಟೋ 31ಎಚ್.ಎಲ್.ಐ1.ಪೊಲೀಸ್ ಇಲಾಖೆ ಹಾಗೂ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವತಿಯಿಂದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ ನ ಜಾಥಾಕ್ಕೆ ಶಾಸಕ ಡಿ.ಜಿ.ಶಾಂತನಗೌಡ, ಮತ್ತು ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಮಾತನಾಡಿದರು.  | Kannada Prabha

ಸಾರಾಂಶ

ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಭಾರತದ 550ಕ್ಕೂ ಹೆಚ್ಚು ಪ್ರಾಂತ್ಯ, ಪ್ರದೇಶಗಳ ಅರಸರನ್ನು ಮನವೊಲಿಸಿ, ಒಗ್ಗೂಡಿಸಿ ಅಖಂಡ ಭಾರತ ಜನ್ಮತಾಳಲು ಕಾರರಾದ ಮಹಾನ್‌ ವ್ಯಕ್ತಿ ಸರ್ದಾರ್ ವಲ್ಲಭ ಭಾಯ್ ಪಟೇಲ್. ಅವರ ಏಕತೆ, ಐಕ್ಯತಾ ಮನೋಭಾವನೆ ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ 2014ರ ಅ.31ರಿಂದ ಅವರ ಜನ್ಮಶತಾಬ್ದಿ ನೆನಪಿಗಾಗಿ ರಾಷ್ಟ್ರೀಯ ಏಕತಾ ದಿವಸ್ ಎಂಬ ಆಚರಣೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

- ಹೊನ್ನಾಳಿಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಶ್ಲಾಘನೆ । ರಾಷ್ಟ್ರೀಯ ಏಕತಾ ದಿವಸ್ ಜಾಥಾ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಭಾರತದ 550ಕ್ಕೂ ಹೆಚ್ಚು ಪ್ರಾಂತ್ಯ, ಪ್ರದೇಶಗಳ ಅರಸರನ್ನು ಮನವೊಲಿಸಿ, ಒಗ್ಗೂಡಿಸಿ ಅಖಂಡ ಭಾರತ ಜನ್ಮತಾಳಲು ಕಾರರಾದ ಮಹಾನ್‌ ವ್ಯಕ್ತಿ ಸರ್ದಾರ್ ವಲ್ಲಭ ಭಾಯ್ ಪಟೇಲ್. ಅವರ ಏಕತೆ, ಐಕ್ಯತಾ ಮನೋಭಾವನೆ ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ 2014ರ ಅ.31ರಿಂದ ಅವರ ಜನ್ಮಶತಾಬ್ದಿ ನೆನಪಿಗಾಗಿ ರಾಷ್ಟ್ರೀಯ ಏಕತಾ ದಿವಸ್ ಎಂಬ ಆಚರಣೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಶುಕ್ರವಾರ ಪೊಲೀಸ್ ಇಲಾಖೆ ಹಾಗೂ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಉಕ್ಕಿನ ಮನುಷ್ಯ ಎಂದು ಖ್ಯಾತಿಯಾಗಿರುವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ 150ನೇ ಜನ್ಮದಿನ ಅಂಗವಾಗಿ ಪಟ್ಟಣದ ಕನಕದಾಸ ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ ಜಾಥಾಕ್ಕೆ ಹಸಿರು ನಿಶಾನೆ ನೀಡಿ ಅವರು ಮಾತನಾಡಿದರು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ವೃತ್ತಿಯಲ್ಲಿ ವಕೀಲರಾಗಿದ್ದ ಸರ್ದಾರ್‌ ಪಟೇಲ್‌ ಭಾರತದ ಮೊದಲ ಗೃಹಮಂತ್ರಿಯಾಗಿಯೂ ಅಭೂತಪೂರ್ವ ಕೆಲಸ ಮಾಡಿದ್ದಾರೆ ಎಂದರು.

ಸರ್ಕಾರಿ ಪ್ರಧಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ. ಧನಂಜಯ್ ಮಾತನಾಡಿದರು. ಪೊಲೀಸ್ ಇನ್‌ಸ್ಪೆಕ್ಟರ್‌ ಸುನೀಲ್ ಕುಮಾರ್, ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ, ಮುಖ್ಯಾಧಿಕಾರಿ ಟಿ.ಲೀಲಾವತಿ. ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ, ಗ್ರಂಥಾಧಿಕಾರಿ ಡಾ.ನಾಗರಾಜ್ ನಾಯ್ಕ, ಉಪನ್ಯಾಸಕ ಶಿವಪ್ಪ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿಗಳು, ಇತರೆ ಇಲಾಖೆ ಅಧಿಕಾರಿಗಳು ಇದ್ದರು.

ಪಟ್ಟಣದ ಕನಕದಾಸ ವೃತ್ತದಿಂದ ಜಾಥಾ ಹೊರಟು ಕನಕ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಶಾಸಕ ಡಿ.ಜಿ. ಶಾಂತನಗೌಡ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜು ವತಿಯಿಂದ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.

- - -

-31ಎಚ್.ಎಲ್.ಐ1: ಏಕತಾ ದಿವಸ್ ಜಾಥಾಕ್ಕೆ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ