ವೆನ್ಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸ್ಟಾಫ್ ನರ್ಸ್‌ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯ ಕಾಂಗ್ರೆಸ್ ಸರ್ಕಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಕೂಡಲೇ ಈ ಬಗ್ಗೆ ಆರೋಗ್ಯ ಸಚಿವರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಪತ್ರದ ಮೂಲಕ ಆಗ್ರಹಿಸಿದರು. ನಾನು ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ವೆನ್ಲಾಕ್‌ನಲ್ಲಿ ಕೇವಲ 16 ತೀವ್ರ ನಿಗಾ ಘಟಕಗಳಿದ್ದವು. ಆ ನಂತರ ರೋಗಿಗಳಿಗೆ ಅನುಕೂಲವಾಗಲು ಹಂತ ಹಂತವಾಗಿ ಅವುಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಅಂತಿಮವಾಗಿ ಜನರು ಕೊರೋನ ಸಂಕಷ್ಟದಲ್ಲಿ ಸಿಲುಕಿದ್ದಾಗ, ಬಿಜೆಪಿ ಸರ್ಕಾರದ ವಿಶೇಷ ಸಹಕಾರದೊಂದಿಗೆ 115 ಕ್ಕೂ ಅಧಿಕ ತೀವ್ರ ನಿಗಾ ಘಟಕ ಹಾಗೂ 250 ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‌ಗಳನ್ನು ಸಜ್ಜುಗೊಳಿಸಲಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಅತ್ಯಂತ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದು ತೀವ್ರ ನಿಗಾ ಘಟಕಗಳ ಸಂಖ್ಯೆಯನ್ನು ಗಣನೀಯವಾಗಿ ಇಳಿಸಿ ರೋಗಿಗಳು ಈ ಹಿಂದಿನಂತೆ ಪರದಾಡುವಂತೆ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ವೆನ್ಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಸುತ್ತಮುತ್ತಲಿನ ಅನೇಕ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸ್ಟಾಫ್ ನರ್ಸ್‌ಗಳ ಕೊರತೆಯಿದ್ದರೆ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಅದು ಬಿಟ್ಟು ಜನಸಾಮಾನ್ಯರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಬೇಡ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಸಚಿವರಾಗಿದ್ದರೂ ಇಂತಹ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.