ಮಸ್ಕಿ: ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಅವರ 51ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿದರು. ಈ ಸಂದರ್ಭದಲ್ಲಿ ಅವರ ಸಾಮಾಜಿಕ, ರಾಜಕೀಯ ಮತ್ತು ಸಂಘಟನಾ ಚಟುವಟಿಕೆಗಳನ್ನು ಒಳಗೊಂಡ ಕನ್ನಡಪ್ರಭದ ವಿಶೇಷ ಪುರವಣಿಯನ್ನು ಸಾರ್ವಜನಿಕರಿಗೆ ಹಂಚಲಾಯಿತು. ಅವರ ಅಭಿಮಾನಿಗಳು ಕನ್ನಡಪ್ರಭ ಪತ್ರಿಕೆ ಹೊರತಂದಿರುವ ವಿಶೇಷ ಪುರವಣಿ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು, ಅಲ್ಲದೆ ಮುಂಬರುವ ದಿನಗಳಲ್ಲಿ ಮಲ್ಲಿಕಾರ್ಜುನ್ ಪಾಟೀಲ್ ಅವರಿಗೆ ಉನ್ನತ ಸ್ಥಾನಮಾನಗಳು ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಬಸನಗೌಡ ಮಧುಬಾಳ, ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.