ಯಕ್ಷಗಾನದಿಂದ ನೆಲದ ಕಲೆ, ಸಂಸ್ಕೃತಿ ಉಳಿವು: ಕ್ಯಾ. ಬ್ರಿಜೇಶ್ ಚೌಟ

KannadaprabhaNewsNetwork |  
Published : Jan 05, 2026, 02:45 AM IST
ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಕರಾವಳಿಯಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಯಕ್ಷಗಾನ ಮಾಡಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದಲ್ಲಿ ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಯೋಜನೆ ವಿದ್ಯಾರ್ಥಿಗಳ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕರಾವಳಿಯಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಯಕ್ಷಗಾನ ಮಾಡಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದಲ್ಲಿ ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಯೋಜನೆ ವಿದ್ಯಾರ್ಥಿಗಳ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನದ ಮೂಲಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರಾಷ್ಟ್ರ ನಿರ್ಮಾಣದ ಕೆಲಸ ಮಾಡುತ್ತಿದೆ. ಯಕ್ಷಗಾನಕ್ಕೆ ದೀರ್ಘಕಾಲಿಕ ಇತಿಹಾಸ ಇದೆ. ಇದು ಹೀಗೆಯೇ ಮುಂದುವರಿಯಲಿ ಎಂದವರು ಆಶಿಸಿದರು.

ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷಗಾನ ಶ್ರೇಷ್ಠಕಲೆಯಾಗಿದ್ದು, ವಿಶ್ವ ಮಟ್ಟದಲ್ಲಿ ಬೆಳೆಯುತ್ತಿದೆ. ದೇಶ ಉಳಿಯಬೇಕಾದರೆ ನಮ್ಮ ಸಂಸ್ಕೃತಿ ಬೆಳೆಯಬೇಕು, ಉಳಿಯಬೇಕು. ಶಾಲಾ ಕಾಲೇಜುಗಳ ಪ್ರೋತ್ಸಾಹ ಮತ್ತು ಪೋಷಕರ ಬೆಂಬಲದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ ಎಂದರು.

ಉದ್ಯಮಿ, ಕಲಾಪೋಷಕ ಬೆಳಿಯೂರುಗುತ್ತು ಎಂ. ರವೀಂದ್ರನಾಥ ಆಳ್ವ, ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ, ಉದ್ಯಮಿ ಕೆ. ಜಯರಾಮ ಶೇಖ ಅಡ್ಯಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೆ. ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಕೇಂದ್ರೀಯ ಮಹಿಳಾ ಘಟಕ ಗೌರವಾಧ್ಯಕ್ಷೆ ಆರತಿ ಆಳ್ವ, ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಪ್ರಭಾಕರ ಜೋಷಿ, ಯಕ್ಷಧ್ರುವ ಯಕ್ಷಶಿಕ್ಷಣದ ಸಂಯೋಜಕ ದೀವಿತ್ ಎಸ್.ಕೆ. ಪೆರಾಡಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಇದ್ದರು.

ಪುರುಷೋತ್ತಮ‌ ಭಂಡಾರಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಲಹಾ ಸಮಿತಿ ಸದಸ್ಯ ದೇವದಾಸ ಶೆಟ್ಟಿ ಬಂಟ್ವಾಳ ಕಾರ್ಯಕ್ರಮ‌ ನಿರ್ವಹಿಸಿದರು.

ಮೂರನೇ ವರ್ಷದ ಯಕ್ಷದ್ರುವ ಯಕ್ಷಶಿಕ್ಷಣ ಯೋಜನೆಯ ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನದಲ್ಲಿ 16 ಶಾಲೆಗಳ 650 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎರಡು ವೇದಿಕೆಗಳಲ್ಲಿ ಕಾರ್ಯಕ್ರಮ‌ ನಡೆಯಿತು.

-----------

ಫೋಟೊ

4ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ