ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ, ಮೈ ಭಾರತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಘಟಕ ಮತ್ತು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಭಾರತವು ಐಕ್ಯತೆ ಮತ್ತು ಸಮಗ್ರತೆ ಬೆಳೆಸಿಕೊಳ್ಳುವಲ್ಲಿ, ಆದರ್ಶ ರಾಷ್ಟ್ರದ ಕನಸು ಹೊತ್ತಿದ್ದ ಸ್ವಾತಂತ್ರ್ಯ ಸೇನಾನಿ ಹಾಗೂ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಸ್ಮರಿಸುವ ಪುಣ್ಯ ದಿನ. ಇವರ ಸ್ಮರಣಾರ್ಥ ಕೇಂದ್ರ ಸರ್ಕಾರವು ಘೋಷಿಸಿದ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲು ಉತ್ಸುಕರಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಪಟೇಲ್ ಅವರ ಗೌರವಾರ್ಥ ಜಿಲ್ಲಾ ಮಟ್ಟದ ಏಕತಾ ನಡಿಗೆ ಯಶಸ್ವಿಯಾಗಲಿ ಎಂದರು.ಜಿಲ್ಲಾ ಯುವಜನಾಧಿಕಾರಿ ಎಸ್.ಶೃತಿ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ ಅವರ ಕೊಡುಗೆಗಳು ದೇಶದ ಇತಿಹಾಸದಲ್ಲಿ ಅವಿಸ್ಮರಣೀಯ ಪಾತ್ರ ವಹಿಸುತ್ತವೆ. ಗುಜರಾತ್‌ನಲ್ಲಿ ಇವರ ಏಕತಾ ಪ್ರತಿಮೆಯನ್ನು ಸ್ಥಾಪಿಸಿ ಒಂದೇ ಭಾರತ ಆತ್ಮ ನಿರ್ಭರ ಭಾರತ ಎಂದು ಅಭಿಮಾನದ ನುಡಿಗಳನ್ನು ಘೋಷಿಸಿದೆ ಎಂದರು.
ಆದಿಚುಂಚನಗಿರಿ ವಿವಿ ಎನ್‌ಎಸ್‌ಎಸ್ ಘಟಕದ ಮುಖ್ಯ ಸಂಯೋಜನಾಧಿಕಾರಿ ಡಾ.ಎ.ಟಿ.ಶಿವರಾಮು, ಉಪಕುಲಪತಿ ಡಾ.ಎಸ್.ಎನ್.ಶ್ರೀಧರ ಮಾತನಾಡಿದರು. ತಹಸೀಲ್ದಾರ್ ಜಿ.ಆದರ್ಶ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಜಿಲ್ಲಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಓಂಪ್ರಕಾಶ್, ವಿಶ್ವವಿ ರಿಜಿಸ್ಟ್ರಾರ್ ಡಾ.ಸಿ.ಕೆ.ಸುಬ್ಬರಾಯ, ಪರೀಕ್ಷಾಂಗ ರಿಜಿಸ್ಟ್ರಾರ್ ಡಾ.ನಾಗರಾಜು, ಪಿಆರ್‌ಒ ಧಮೇಂದ್ರ, ಮೈ ಭಾರತ್ ಸಂಸ್ಥೆಯ ಹರ್ಷ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸಿ.ಎಲ್.ಶಿವಣ್ಣ, ಎಸ್.ಕಾಂತರಾಜು ಸೇರಿದಂತೆ ಹಲವರು ಇದ್ದರು.