ಹಾವೇರಿ: ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳವರ ಇಷ್ಟಲಿಂಗ ಮಹಾಪೂಜಾ ಹಾಗೂ ದ್ವಾದಶ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ಮತ್ತು ಭಾವೈಕ್ಯತಾ ಸಮಾರಂಭ ಫೆ. 21ರಿಂದ 23ರ ವರೆಗೆ ನಗರದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮರಿಕಲ್ಯಾಣ ಖ್ಯಾತಿ ಪಡೆದ ಹಾವೇರಿಯಲ್ಲಿ ಮೂರು ದಿನಗಳ ಕಾಲ ಇಷ್ಟಲಿಂಗ ಪೂಜೆ, ಧರ್ಮೋಪದೇಶ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಫೆ. 21ರಂದು ಸಂಜೆ 4ಕ್ಕೆ ಉಜ್ಜಯಿನಿ ಜಗದ್ಗುರುಗಳ ಪುರಪ್ರವೇಶ ಆಗಲಿದೆ. ಪುರಸಿದ್ದೇಶ್ವರ ದೇವಸ್ಥಾನದಿಂದ ಅಲಂಕೃತ ಸಾರೋಟದಲ್ಲಿ ಪೂರ್ಣಕುಂಭ, ಆರತಿಗಳೊಂದಿಗೆ ಸ್ವಾಗತಿಸಿ ಸಕಲ ವಾದ್ಯ ವೈಭವಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯುವ ಭಾವೈಕ್ಯತಾ ಸದ್ಧರ್ಮ ಸಭೆಗೆ ಆಹ್ವಾನಿಸಲಾಗುವುದು. ಸಂಜೆ 7ಕ್ಕೆ ನಡೆಯುವ ಸಭೆಯಲ್ಲಿ ಜಗದ್ಗುರುಗಳು ಸಾನಿಧ್ಯ ವಹಿಸುವರು. ಗೌರಿಮಠದ ಶ್ರೀಗಳು ಉದ್ಘಾಟಿಸುವರು. ಫೆ. 22ರಂದು ಬೆಳಗ್ಗೆ 7.30ಕ್ಕೆ ಇಷ್ಟಲಿಂಗ ಮಹಾ ಪೂಜೆ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 7ಕ್ಕೆ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಧರ್ಮಸಭೆಯಲ್ಲಿ ನೆಗಳೂರು ಗುರುಶಾಂತೇಶ್ವರ ಶ್ರೀಗಳು ಅಧ್ಯಕ್ಷತೆ ವಹಿಸುವವರು. ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ.ಫೆ. 23ರಂದು ಪ್ರಾಥಃಕಾಲ 7ಕ್ಕೆ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಾಡಿನ ವಿವಿಧ ಮಠಾಧೀಶರಿಂದ ಮಹಾಸನ್ನಿಧಿಯವರಿಗೆ ಹರಿದ್ರಾಲೇಪನ ಹಾಗೂ ಮಂಗಲಸ್ನಾನ ಇತರೆ ಧಾರ್ಮಿಕ ವಿವಿಧಾನಗಳು ನಡೆಯಲಿವೆ. ಅಂದು ಸಂಜೆ 7ಕ್ಕೆ ಉಜ್ಜಯಿನಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಧರ್ಮಸಭೆಯ ಅಧ್ಯಕ್ಷತೆಯನ್ನು ಬನ್ನಿಕೊಪ್ಪದ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ವಹಿಸಿುವರು ಎಂದರು.ಸುದ್ದಿಗೋಷ್ಠಿಯಲ್ಲಿ ವಿರೂಪಾಕ್ಷಪ್ಪ ಹತ್ತಿಮತ್ತೂರ, ಶಂಭುಲಿಂಗಪ್ಪ ಕೌದಿ, ಕರಬಸನಗೌಡ ಪಾಟೀಲ, ಮಲ್ಲಿಕಾರ್ಜುನಯ್ಯ ಹಿರೇಮಠ, ಶಿವಲಿಂಗಪ್ಪ ಕಲ್ಯಾಣಿ, ಸಂತೋಷ ಹಿರೇಮಠ, ಚನ್ನಬಸಯ್ಯ ಹಿರೇಮಠ, ಸಿದ್ದಲಿಂಗಪ್ಪ ಮಹರಾಜಪೇಟ, ಶಂಕ್ರಪ್ಪ ಕುಂದೂರ, ಸುರೇಶ ಮುರಡಣ್ಣವರ, ನಿಖಿಲ್ ಡೊಗ್ಗಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕೃತಿ ಕಲಿಸಿಶಿಗ್ಗಾಂವಿ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕೃತಿ, ಆಚಾರ, ವಿಚಾರವನ್ನು ಕಲಿಸಬೇಕು ಎಂದು ಆದ್ರಳ್ಳಿಯ ಡಾ. ಕುಮಾರ ಮಹಾರಾಜರು ತಿಳಿಸಿದರು.ತಾಲೂಕಿನ ಯತ್ತಿನಹಳ್ಳಿ ತಾಂಡಾದಲ್ಲಿ ಇತ್ತೀಚೆಗೆ ನಡೆದ ಗೌರಿ ಹಬ್ಬದ ಸಮಾರಂಭದಲ್ಲಿ ಮಾತನಾಡಿ, ಮಂತ್ರಿಗಳ ಮಕ್ಕಳು ಮಂತ್ರಿಗಳೇ ಆಗುತ್ತಿದ್ದಾರೆ. ಬಡವರ ಮಕ್ಕಳು ಬಡವರಾಗಿ ಉಳಿಯುತ್ತಿದ್ದಾರೆ. ಹಾಗಾಗಿ ಗುಣಮಟ್ಟದ ಶಿಕ್ಷಣ ಪಡೆದು ಸಮಾಜ ಪ್ರಗತಿ ಸಾಧಿಸಲಿ ಎಂದು ಆಶಿಸಿದರು.
ಶಶಿಧರ್ ಪಾಟೀಲ್ ಮಾತನಾಡಿ, ಲಂಬಾಣಿ ಸಮುದಾಯವು ಸ್ವಾವಲಂಬಿ ಬದುಕು ನಡೆಸುತ್ತಿದೆ. ಅಲ್ಲದೇ ಕಷ್ಟಪಟ್ಟು ದುಡಿಯುವ ಶ್ರಮಿಕ ಸಮಾಜ ಎಂದು ಗುರುತಿಸಿಕೊಂಡಿದೆ ಎಂದು ಶ್ಲಾಘಿಸಿದರು.ಗ್ರಾಮದ ಈರಣ್ಣ ನಾಯ್ಕ, ರಾಮಣ್ಣ ಡಾವ್, ಮಲ್ಲೇಶ ಕಾರಬಾರಿ, ಮಹಾಂತೇಶ ಬಿದರಗಡ್ಡಿ, ಪ್ರಭು ಬಿದರಗಡ್ಡಿ, ನಾಗರಾಜ ಲಮಾಣಿ ಸೇರಿದಂತೆ ಯುವಕರು, ಗ್ರಾಮಸ್ಥರು ಇದ್ದರು.