ಕನ್ನಡಪ್ರಭ ವಾರ್ತೆ ಹುಕ್ಕೇರಿ
ದೆಹಲಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಮತ್ತು ಕೌಶಲಾಭಿವೃದ್ಧಿ ಇಲಾಖೆಯಿಂದ ಕೊಡಮಾಡಿದ ಗೌರವ ಡಾಕ್ಟರೇಟ್ ಪದವಿಯನ್ನು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಪಟ್ಟಣಶೆಟ್ಟಿ ಅವರಿಗೆ ಪ್ರದಾನ ಮಾಡಿ ಗೌರವಿಸಿದರು.
ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪಟ್ಟಣಶೆಟ್ಟಿ ಅವರು ಮಾಡಿರುವ ಅಪಾರ ಸಾಧನೆ ಗುರುತಿಸಿ ಅವರಿಗೆ ಈ ಪದವಿ ಪ್ರದಾನ ಮಾಡಲಾಗಿದೆ.ಕೇಂದ್ರ ಕೌಶಾಲಾಭಿವೃದ್ಧಿ ಮಾಜಿ ಸಚಿವ ಸಯ್ಯದ್ ಶಹಾನವಾಜ್ ಹುಸೇನ್, ಒಲಿಂಪಿಕ್ಸ್ ಪ್ರಶಸ್ತಿ ವಿಜೇತೆ ನೇಹಾ ರಾಟಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ ಇಂಜಿನಿಯರರಾಗಿ, ಹುಕ್ಕೇರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಆಗಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಉಪವಿಭಾಗದ ಎಇಇ ಆಗಿ ಸರ್ಕಾರಿ ಸೇವೆ ಸಲ್ಲಿಸಿದ ಡಾ.ಎ.ಬಿ.ಪಟ್ಟಣಶೆಟ್ಟಿ, ಚಿಕ್ಕೋಡಿ ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಭಾರಿ ಇಇ ಆಗಿಯೂ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.