ಮೂಲ್ಕಿ: ಪಟ್ಲ ಪೌಂಡೇಶನ್ ನ ಕೇಂದ್ರೀಯ ಮಹಿಳಾ ಘಟಕ ಕಳೆದ ಒಂಬತ್ತು ವರ್ಷಗಳಿಂದ ಕಲಾ ಸೇವೆ ಮಾಡುತ್ತಾ ಬಂದಿದ್ದು ಕೇಂದ್ರೀಯ ಘಟಕ ಎಲ್ಲಾ ಕಡೆ ವಿಸ್ತರಣೆಯಾಗಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಮಾತನಾಡಿ, ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಯವರು ಆಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದು ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಅವರು ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಿಸಿ ಕಲಾವಿದರಿಗೆ ಆಸರೆಯಾಗಿದ್ದು ಕಲಾವಿದರಿಗೆ ಮನೆ ನಿರ್ಮಾಣಕ್ಕೆ, ಕಲಾವಿದರ ಮಕ್ಕಳಿಗೆ ಶಿಕ್ಷಣ, ಕಲಾವಿದರ ಆರೋಗ್ಯಕ್ಕೆ ಟ್ರಸ್ಟ್ ನಿಂದ ಸಹಾಯ ಮಾಡುತ್ತಿದ್ದು ಟ್ರಸ್ಟ್ ಮೂಲಕ ನಿರಂತರ ಕಾರ್ಯಯೋಜನೆಗಳನ್ನು ಕೈಗೊಳ್ಳುತ್ತಿದ್ದಾರೆಂದು ಹೇಳಿದರು.
ಸಮಾರಂಭದಲ್ಲಿ ಸುರತ್ಕಲ್ ದುರ್ಗಾಂಬಾ ಮಹಿಳಾ ತಾಳಮದ್ದಲೆ ಬಳಗದ ಅಧ್ಯಕ್ಷೆ ಸುಲೋಚನ ರಾವ್ ತಡಂಬೈಲ್, ಕೆರೆಕಾಡು ಮಕ್ಕಳ ಮೇಳದ ರಂಗ ಸಹಾಯಕರಾದ ರೇಷ್ಮಾ ಅವರನ್ನು ಸನ್ಮಾನಿಸಲಾಯಿತು. ಪೂಜಾ ಕೆರೆಕಾಡು ಅವರಿಗೆ ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಲಾ ಪೋಷಕರಾದ ಶಕುಂತಲಾ ರಮಾನಂದ ಭಟ್ ಇಡ್ಯಾ, ರೂಪರಾಣಿ ಶೆಟ್ಟಿ ಬೆಳ್ಮಣ್, ಆಶಾ ಪ್ರಭಾಕರ ರಾವ್ ಮಂಗಳೂರು, ಕವಿತಾ ಶಾಸ್ತ್ರಿ ಮಂಗಳೂರು, ಸರೋಜ ಟಿ. ಶೆಟ್ಟಿ ಸುರತ್ಕಲ್, ರಾಜೇಶ್ವರಿ ಡಿ ಶೆಟ್ಟಿ ಸುರತ್ಕಲ್, ವಿದ್ಯಾಚಂದ್ರಹಾಸ ಶೆಟ್ಟಿ ಬಂಟ್ವಾಳ , ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ, ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಪೂರ್ಣಿಮಾ ಶಾಸ್ತ್ರಿ ಉಪಸ್ಥಿತರಿದ್ದರು. ಡಾ ಸುಧಾ ಚಂದ್ರಶೇಖರ ಶೆಟ್ಟಿ, ವಸುಂಧರ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳದವರಿಂದ ಛಾಯಾನಂದನ ಯಕ್ಷಗಾನ ನಡೆಯಿತು.