ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸಿ: ಸಂತೋಷ್ ಲಾಡ್

KannadaprabhaNewsNetwork |  
Published : Sep 19, 2025, 01:01 AM ISTUpdated : Sep 19, 2025, 01:02 AM IST
ಚಿತ್ರ : 18ಎಂಡಿಕೆ1 : ಸಭೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್  ಮಾತನಾಡಿದರು.  | Kannada Prabha

ಸಾರಾಂಶ

ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಕಾರ್ಮಿಕ ಸಂಘಟನೆಗಳು, ಹೋಂ ಸ್ಟೇ ಹಾಗೂ ಹೋಟೆಲ್ ಅಸೋಷಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಕಾರ್ಮಿಕ ಸಂಘಟನೆಗಳು, ಹೋಂ ಸ್ಟೇ ಹಾಗೂ ಹೋಟೆಲ್ ಅಸೋಷಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.ಹೋಂಸ್ಟೇ, ಹೋಟೆಲ್ ಸೇರಿದಂತೆ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು. ಸಿಸಿಟಿವಿ ಅಳವಡಿಸುವುದು, ಸಂಚಾರಿ ದೂರವಾಣಿ ಸಂಖ್ಯೆ ಸೇರಿದಂತೆ ವಾಸ್ತವ್ಯ ಹೂಡುವವರ ಮಾಹಿತಿ ಇರಬೇಕು ಎಂದು ಸಂತೋಷ್ ಲಾಡ್ ಹೇಳಿದರು.ಹೋಂ ಸ್ಟೇ ನೋಂದಣಿ, ಪರವಾನಗಿ, ನವೀಕರಣ ಸಂಬಂಧ ಪ್ರವಾಸೋದ್ಯಮ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಸಚಿವರ ಜೊತೆ ಚರ್ಚಿಸಲಾಗುವುದು. ಜೊತೆಗೆ ಶಾಸಕರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲು ನಿಯೋಗ ತೆರಳುವಂತೆ ಸಲಹೆ ನೀಡಿದರು.

ಈ ಸಂದರ್ಭ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪೌರಾಡಳಿತ ಸಚಿವ ರಹೀಮ್ ಖಾನ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ದಸರಾ ನಂತರ ನಿಯೋಗ ತೆರಳಿ ಭೇಟಿ ಮಾಡಲಾಗುವುದು ಎಂದರು.

ಹೋಂಸ್ಟೇ ಅಸೋಷಿಯೇಷನ್‌ಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕಿದ್ದು, ಕೆಲವು ತಾಂತ್ರಿಕ ತೊಂದರೆಯಿಂದ ವಿಳಂಬವಾಗುತ್ತಿದೆ. ಆದ್ದರಿಂದ ಮ್ಯಾನ್ಯುವೆಲ್ ಮೂಲಕ ನೋಂದಣಿ ಮಾಡಿಕೊಳ್ಳುವಂತಾಗಬೇಕು. ಪರವಾನಗಿ ನವೀಕರಣ ಮಾಡಬೇಕು ಎಂದು ಶಾಸಕರು ಸಲಹೆ ನೀಡಿದರು.ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿ, ಜಿಲ್ಲೆಯಲ್ಲಿ ಸುಮಾರು 230 ಅರ್ಜಿಗಳು ಬಾಕಿ ಇದೆ ಎಂದು ತಿಳಿಸಿದರು.ಚೇಂಬರ್ ಆಫ್ ಕಾಮರ್ಸ್ ಜಿಲ್ಲಾ ಘಟಕ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮದಿಂದ ಹಲವರಿಗೆ ಉದ್ಯೋಗ ದೊರೆತಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಕಾಲ ಮಿತಿಯಲ್ಲಿ ಎನ್‌ಒಸಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಮಿಕ ಸಂಘಟನೆ ಮುಖಂಡ ಭರತ್ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಮಿಕ ನಿರೀಕ್ಷಕ ಅಧಿಕಾರಿಯ ಕೊರತೆ ಇದ್ದು, ವಿರಾಜಪೇಟೆ ಮತ್ತು ಸೋಮವಾರಪೇಟೆಗೆ ಒಬ್ಬರೇ ಅಧಿಕಾರಿ ಇದ್ದಾರೆ. ವಿರಾಜಪೇಟೆ ಮತ್ತು ಪೊನ್ನಂಪೇಟೆಗೆ ಕಾರ್ಮಿಕ ನಿರೀಕ್ಷಕ ಅಧಿಕಾರಿಯವರನ್ನು ನಿಯೋಜಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಹೋಂ ಸ್ಟೇ ಅಸೋಷಿಯೇಷನ್‌ನ ಮಾಜಿ ಅಧ್ಯಕ್ಷರಾದ ದಿಲೀಪ್ ಚಂಗಪ್ಪ, ಮತ್ತೊಬ್ಬ ಮಾಜಿ ಅಧ್ಯಕ್ಷ ಕರುಂಬಯ್ಯ, ತೋಟ ಕಾರ್ಮಿಕ ಸಂಘಟನೆಯ ಮಹಾದೇವು, ಕಾಫಿ ಬೆಳೆಗಾರ ಬೋಸ್, ಕುಶಾಲನಗರ ಚೇಂಬರ್ ಆಫ್ ಕಾರ್ಮಸ್ ಅಧ್ಯಕ್ಷ ಕೆ.ಎಸ್.ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಪ್ರಮುಖರಾದ ಧನಂಜಯ, ಚೇಂಬರ್ ಆಫ್ ಕಾಮರ್ಸ್ ತಾಲ್ಲೂಕು ಘಟಕದ ಅಧ್ಯಕ್ಷರಾದ ಧನುಕುಮಾರ್, ಸಂತೋಷ್ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷ ಮಹರೂಸ್ ಖಾನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಡಾ.ಎಸ್.ಬಿ.ರವಿಕುಮಾರ, ಉಪ ಕಾರ್ಮಿಕ ಆಯುಕ್ತ ಎಚ್.ಎಲ್.ಗುರುಪ್ರಸಾದ್, ನಾಜಿಯಾ ಸುಲ್ತಾನ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಶಶಿಧರ, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ