ನೀರಿನ ಸದ್ಬಳಕೆಗೆ ಹೆಚ್ಚಿನ ಗಮನ ನೀಡಿ: ಶೃತಿ

KannadaprabhaNewsNetwork | Published : Nov 12, 2023 1:03 AM

ಸಾರಾಂಶ

ವುಮೆನ್ ಆಫ್ ವಾಟರ್, ವಾಟರ್ ಆಫ್ ವುಮೆನ್ ಕ್ಯಾಂಪೇನ್

ಕನ್ನಡಪ್ರಭ ವಾರ್ತೆ, ಭದ್ರಾವತಿ

ಮಹಿಳೆಯರು ನೀರಿನ ಸದ್ಬಳಕೆಗೆ ಹೆಚ್ಚಿನ ಗಮನ ನೀಡುವ ಜೊತೆಗೆ ಇತರರಿಗೂ ಜಾಗೃತಿ ಮೂಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಶೃತಿ ಸಿ.ವಸಂತಕುಮಾರ್ ಕೆ.ಸಿ. ಹೇಳಿದರು.

ಭದ್ರಾವತಿ ನಗರಸಭೆ ವತಿಯಿಂದ "ವುಮೆನ್ ಆಫ್ ವಾಟರ್, ವಾಟರ್ ಆಫ್ ವುಮೆನ್ ಕ್ಯಾಂಪೇನ್'''''''' ಜಲ್ ದಿವಾಲಿ ಅಭಿಯಾನ ಅಂಗವಾಗಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಬೈಪಾಸ್ ರಸ್ತೆ, ಆನೇಕೊಪ್ಪದ ನಗರಸಭೆ ಜಲ ಶುದ್ಧೀಕರಣ ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಟುಂಬದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರು ನೀರಿನ ಸದ್ಬಳಕೆ ಕುರಿತು ಅರಿವು ಹೊಂದಬೇಕು. ನೀರನ್ನು ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು. ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಅನುಸರಿಸುವ ಕ್ರಮ ಮತ್ತು ಶ್ರಮ ಹಾಗೂ ನೀರಿನ ಮಹತ್ವ ಅರಿತಾಗ ನೀರಿನ ಮಿತವ್ಯಯ ಸಾಧ್ಯ ಎಂಬ ಆಲೋಚನೆಯೊಂದಿಗೆ ಮಹಿಳೆಯರಿಗೆ ಅರಿವು ಮೂಡಿಸಲಾಗುತ್ತಿದೆ. ಮಹಿಳೆಯರು ತಮ್ಮ ಸುತ್ತಮುತ್ತಲಿನವರಿಗೂ ಈ ಕುರಿತು ಮಾಹಿತಿ ನೀಡುವ ಮೂಲಕ ಜಾಗೃತಿಗೊಳಿಸಬೇಕು ಎಂದರು.

ನಗರಸಭೆ ಸದಸ್ಯ ಚನ್ನಪ್ಪ ಮಾತನಾಡಿ, ನೀರು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಎಲ್ಲರಿಗೂ ನೀರು ಲಭಿಸಬೇಕು. ಈ ನಿಟ್ಟಿನಲ್ಲಿ ಮಹಿಳೆಯರು ಚಿಂತಿಸಬೇಕು. ವ್ಯರ್ಥ ಮಾಡುವ ಬದಲು ಉಳಿಸಿಕೊಂಡಲ್ಲಿ ಇತರರಿಗೂ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಮೊದಲು ಮಹಿಳೆಯರಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ. ಸುರೇಶ್ ಮತ್ತು ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಮಾತನಾಡಿದರು.

ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ಲತಾ ಚಂದ್ರಶೇಖರ್, ಜಯಶೀಲ ಸುರೇಶ್, ಸವಿತಾ ಉಮೇಶ್, ನಾಗರತ್ನ ಅನಿಲ್‌ಕುಮಾರ್, ಅನಿತಾ ಮಲ್ಲೇಶ್, ಮಾಜಿ ಸದಸ್ಯೆ ಲಕ್ಷ್ಮೀದೇವಿ, ಜಿಲ್ಲಾ ಸಮನ್ವಯಾಧಿಕಾರಿ ಕಾಶಿ, ಎಂಜಿನಿಯರ್‌ಗಳಾದ ಎಸ್.ಆರ್. ಸತೀಶ್, ಸಂತೋಷ್ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಗರಸಭೆ ವ್ಯಾಪ್ತಿಯ 30 ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆ ಪ್ರಕ್ರಿಯೆ ಹಾಗೂ ಮಾಲೀಕತ್ವದ ಭಾವನೆ ಕುರಿತು ಅರಿವು ಮೂಡಿಸಲಾಯಿತು. ಮಹಮದ್ ಗೌಸ್ ಕಾರ್ಯಕ್ರಮ ನಿರೂಪಿಸಿದರು.

- - - -ಡಿ10ಬಿಡಿವಿಟಿ2:

ಭದ್ರಾವತಿ ನಗರಸಭೆ ವತಿಯಿಂದ ಮಹಿಳಾ ಸ್ವಸಹಾಯ ಸಂಘ ಸದಸ್ಯರಿಗೆ ಆನೇಕೊಪ್ಪದ ನಗರಸಭೆ ಜಲ ಶುದ್ಧೀಕರಣ ಘಟಕದಲ್ಲಿ ಅರಿವು ಮೂಡಿಸುವ ನಡೆಯಿತು.

Share this article