ಹೂವಿನಹಡಗಲಿ: ಇಂದಿನ ವಿದ್ಯಾರ್ಥಿಗಳು ಬಹಳ ಬುದ್ಧಿವಂತರಿದ್ದಾರೆ. ಆದರೆ ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕಿದೆ ಎಂದು ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ್ ರೆಡ್ಡಿ ಹೇಳಿದರು.
ವೀರಶೈವ ವಿದ್ಯಾವರ್ಧಕ ಸಂಘವು ಬಡ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಇದೆ, ಹಿರಿಯ ವಿದ್ಯಾರ್ಥಿಗಳು ನಿಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕೆಂದು ಹೇಳಿದರು.ಪದವಿ ಕಾಲೇಜು ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಮಾತನಾಡಿ, ಕರ್ನಾಟಕ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು, ಹೊರ ಹಾಕುವ ಪ್ರಯತ್ನ ನಡೆದಿದೆ. ವಿದ್ಯಾರ್ಥಿಗಳು ಸಾಧನೆಯ ಕಡೆ ಗಮನ ಕೊಡಬೇಕೆಂದು ಹೇಳಿದರು.
ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಅಮರೇಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವೀರಶೈವ ವಿದ್ಯಾವರ್ಧಕ ಸಂಘವು ಈ ಗ್ರಾಮೀಣ ಭಾಗದಲ್ಲಿ, ಕಾಲೇಜನ್ನು ಸ್ಥಾಪನೆ ಮಾಡದಿದ್ದರೆ ಎಷ್ಟೋ ಜನ ಬಡ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣವೇ ಸಿಗುತ್ತಿರಲಿಲ್ಲ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲು, ವೀವಿ ಸಂಘದ ಹಿರಿಯರು ಈ ಭಾಗದಲ್ಲಿ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ, ಇದರಿಂದ ಅನೇಕ ಕುಟುಂಬಗಳು ಸಮಾಜದಲ್ಲಿ, ಸ್ಥಾನಮಾನವನ್ನು ಗಳಿಸಲು ಸಾಧ್ಯವಾಗಿದೆ ಎಂದರು.ಕರ್ನಾಟಕ ಸಂಘದ ಕಾರ್ಯದರ್ಶಿ ಎಂಪಿಎಂ ಶಿವಪ್ರಕಾಶ್, ವಿದ್ಯಾರ್ಥಿಗಳಿಗೆ ಕೊಡ ಮಾಡುವ ದತ್ತಿ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು.
ಉಪನ್ಯಾಸಕ ನಾಗರಾಜ ಬಾರ್ಕಿ ಸ್ವಾಗತಿಸಿದರು. ಉಪನ್ಯಾಸಕ ಪ್ರಭು ಮತ್ತು ಸಿಮ್ರಾನ್ ನಿರೂಪಿಸಿದರು. ಉಪನ್ಯಾಸಕಿ ಶ್ವೇತಾ ರಂಗಾಪುರ ವಂದಿಸಿದರು.