ಸಕಾಲದಲ್ಲಿ ತೆರಿಗೆ ಕಟ್ಟಿ ಅಭಿವೃದ್ಧಿಗೆ ಸಹಕರಿಸಿ: ತಾಪಂ ಸಿಒ ರಾಮಲಿಂಗಯ್ಯ

KannadaprabhaNewsNetwork |  
Published : May 26, 2025, 12:10 AM IST
25ಕೆಎಂಎನ್ ಡಿ25 | Kannada Prabha

ಸಾರಾಂಶ

ಅಕುಶಲ ಕೂಲಿ ಕಾರ್ಮಿಕರ ಸಮ್ಮುಖದಲ್ಲಿ ಕರ ವಸೂಲಾತಿ ಮಾಸಾಚರಣೆಯನ್ನು ಮಾಡಿ ಪ್ರತಿಯೊಬ್ಬರು 1000 ರು. ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು. ಸಕಾಲದಲ್ಲಿ ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸಕಾಲದಲ್ಲಿ ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಮನವಿ ಮಾಡಿದರು.

ಸಮೀಪದ ದೊಡ್ಡರಸಿನಕೆರೆ ಗ್ರಾಪಂ ವ್ಯಾಪ್ತಿಯ ಗೌಡಯ್ಯನದೊಡ್ಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಸೃಜನೆಯಾಗುತ್ತಿರುವ ಕಾಲುವೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ಕರ ವಸೂಲಾತಿ ಮಾಸಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಕುಶಲ ಕೂಲಿ ಕಾರ್ಮಿಕರ ಸಮ್ಮುಖದಲ್ಲಿ ಕರ ವಸೂಲಾತಿ ಮಾಸಾಚರಣೆಯನ್ನು ಮಾಡಿ ಪ್ರತಿಯೊಬ್ಬರು 1000 ರು. ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು ಎಂದರು.

ತಾಲೂಕಿನಲ್ಲಿ ಬೃಹತ್ ಮಟ್ಟದಲ್ಲಿ ‘ದುಡಿಯೋಣ ಬಾ ಅಭಿಯಾನ’ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ತಿಳಿಸಿದರು.

ಅಕುಶಲ ಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿ ನರೇಗಾ ಯೋಜನೆಯಡಿ ಪ್ರತಿಯೊಬ್ಬರು ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬೇಕು. ವೈಯಕ್ತಿಕವಾಗಿ ಒಂದು ಉದ್ಯೋಗ ಚೀಟಿಯಿಂದ 5 ಲಕ್ಷದ ವರೆಗೂ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಪಡೆದುಕೊಳ್ಳಬಹುದು. ಈ ಅವಧಿಯಲ್ಲಿ ಕಾಮಗಾರಿ ಸ್ಥಳದಲ್ಲಿ ನೀಡಲಾಗಿರುವ ಸವಲತ್ತುಗಳ ಜೊತೆಗೆ ಇತರೆ ಏನಾದರೂ ಸಮಸ್ಯೆ ಇದ್ದರೆ ತಿಳಿಸಬೇಕು ಎಂದರು.

ಇದೇ ವೇಳೆ ಕುಡಿಯುವ ನೀರಿನ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಮುಂತಾದ ಸಲವತ್ತುಗಳನ್ನು ಪರಿಶೀಲಿಸಿದರು. ಸಹಾಯಕ ನಿರ್ದೇಶಕರಾದ ಮಂಜುನಾಥ್, ಗ್ರಾಪಂ ಪಿಡಿಒ ನಾಗೇಶ್, ಮೇಟ್‌ಗಳು, ತಾಂತ್ರಿಕ ಸಹಾಯಕರು, ಕೂಲಿ ಕಾರ್ಮಿಕರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಜರಿದ್ದರು.

ಶಾಸಕರಿಂದ ಕಾಮಗಾರಿಗಳ ಗುಣಮಟ್ಟ ವೀಕ್ಷಣೆ

ಮದ್ದೂರು:

ಪುರಸಭೆ ವ್ಯಾಪ್ತಿಯ 1ನೇ ವಾರ್ಡ್ (ಟಿ.ಬಿ.ಸರ್ಕಲ್ ಬಳಿಯ ಸೆಟು ಬಿಲ್ಡಿಂಗ್ ಹತ್ತಿರ) ಹಮ್ಮಿಕೊಂಡಿದ್ದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಶಾಸಕ ಕೆ.ಎಂ.ಉದಯ್ ವೀಕ್ಷಣೆ ಮಾಡಿದರು.

ವೀಕ್ಷಣೆ ಸಂದರ್ಭದಲ್ಲಿ ಕೆಲವೆಡೆ ಸಣ್ಣ-ಪುಟ್ಟ ಲೋಪಗಳು ಕಂಡುಬಂದವು. ಈ ಸಂಬಂಧ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಲಾಗಿದ್ದು, ಸಾರ್ವಜನಿಕರ ಅಭಿಪ್ರಾಯಗಳನ್ನು ಆಲಿಸಿ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಹುಡುಕಲಾಯಿತು.

ಕಾಮಗಾರಿಗಳ ಗುಣಮಟ್ಟವನ್ನು ನಿರಂತರವಾಗಿ ಕಾಪಾಡುತ್ತಲೇ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂಬ ನಿಬಂಧನೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರು ಸ್ಪಷ್ಟ ಸೂಚನೆ ನೀಡಿದರು. ಸಾರ್ವಜನಿಕರ ಸಹಕಾರದೊಂದಿಗೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ತಿಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ