ಹೆಸರು ಕಾಳು ಖರೀದಿಸಿದ ಹಣ ಪಾವತಿಸುವಂತೆ ಒತ್ತಾಯಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

KannadaprabhaNewsNetwork |  
Published : Feb 05, 2026, 02:15 AM IST
ರೈತ ಸೇನಾ ಕರ್ನಾಟಕ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. | Kannada Prabha

ಸಾರಾಂಶ

ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಹೆಸರು ಕಾಳುಗಳನ್ನು ಸರ್ಕಾರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಿದೆ. ಬ್ಯಾಹಟ್ಟಿ, ಸುಳ್ಳ, ಕುಸುಗಲ್‌, ಅಮರಗೋಳದ ಖಾತೆದಾರರು ಡಿ. 23ರಂದು ಬ್ಯಾಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾರ್ಕೆಟಿಂಗ್ ಫೆಡರೇಶನ್ ಅಧಿಕಾರಿಗಳ ಮೂಲಕ ಮಾರಾಟ ಮಾಡಿದ್ದಾರೆ.

ಧಾರವಾಡ:

ಖರೀದಿ ಕೇಂದ್ರದ ಮೂಲಕ ಜಿಲ್ಲೆಯ ಹಲವು ರೈತ ಕುಟುಂಬಗಳಿಂದ ಹೆಸರು ಖರೀದಿ ಮಾಡಿ ಇದುವರೆಗೂ ಹಣ ನೀಡಿದಿರುವ ಕ್ರಮ ಖಂಡಿಸಿ ರೈತ ಸೇನಾ ಕರ್ನಾಟಕ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಹೆಸರು ಕಾಳುಗಳನ್ನು ಸರ್ಕಾರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಿದೆ. ಬ್ಯಾಹಟ್ಟಿ, ಸುಳ್ಳ, ಕುಸುಗಲ್‌, ಅಮರಗೋಳದ ಖಾತೆದಾರರು ಡಿ. 23ರಂದು ಬ್ಯಾಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾರ್ಕೆಟಿಂಗ್ ಫೆಡರೇಶನ್ ಅಧಿಕಾರಿಗಳ ಮೂಲಕ ಮಾರಾಟ ಮಾಡಿದ್ದಾರೆ. ಆದರೆ, ಈ ಎಲ್ಲ ರೈತರ ಖಾತೆಗಳಿಗೆ ಸರ್ಕಾರದಿಂದ ಬರಬೇಕಾದ ಬೆಂಬಲ ಬೆಲೆ ಹಣ ಇನ್ನೂ ಜಮೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾರ್ಕೆಟಿಂಗ್ ಫೆಡರೇಶನ್ ಅಧಿಕಾರಿಗಳು ಈ ಬಗ್ಗೆ ಪ್ರಶ್ನಿಸಿದ ರೈತರ ಜತೆಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಸರಿಯಲ್ಲ. ಈ ಅಧಿಕಾರಿಯು ಸುಮಾರು 15 ವರ್ಷಗಳಿಂದ ಒಂದೇ ಜಾಗದಲ್ಲಿ ನೆಲೆ ಹೂಡಿದ್ದು ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಕೂಡಲೇ ಈ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಜರುಗಿಸಿ ಖಾತೆದಾರರಿಗೆ ಕೂಡಲೇ ಬೆಂಬಲ ಬೆಲೆಯ ಹಣ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ರೈತ ಸೇನಾ ಕರ್ನಾಟಕದ ವೀರೇಶ ಸೊಬರದಮಠ ಮತ್ತಿತರರು ಇದ್ದರು.

ಬೆಂಬಲ ಬೆಲೆಯಲ್ಲಿ 13,340 ಕ್ವಿಂಟಲ್‌ ಹೆಸರು ಖರೀದಿಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ಹೆಸರು ಕಾಳು ಉತ್ಪನ್ನ ಮಾರಾಟಕ್ಕಾಗಿ ನೋಂದಣಿ ಮಾಡಿಕೊಂಡ ಜಿಲ್ಲೆಯ 9,577 ರೈತರ ಪೈಕಿ 1,630 ರೈತರು 13,340.50 ಕ್ವಿಂಟಲ್ ಹೆಸರು ಕಾಳನ್ನು ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿದ್ದಾರೆ. ಈಗಾಗಲೇ 1,512 ರೈತರಿಗೆ ₹ 9,51,85,408 ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಪಾವತಿಸಲಾಗಿದೆ. ಬಾಕಿ ಇರುವ 210 ರೈತರಿಗೆ ಹಣ ಪಾವತಿ ಕಾರ್ಯ ಪ್ರಗತಿಯಲ್ಲಿದ್ದು, ಫೆ. 7ರೊಳಗೆ ಹಣ ಪಾವತಿ ಆಗಲಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಧಾರವಾಡ ಉಪನಿರ್ದೇಶಕ ವಿ.ಎಂ. ಲಮಾಣಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 97,406 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಕಾಳು ಬಿತ್ತನೆಯಾಗಿತ್ತು. ಹೆಸರು ಕಾಳು ಉತ್ಪನ್ನ ಖರೀದಿಗಾಗಿ ರಾಜ್ಯ ಮಾರಾಟ ಮಹಾಮಂಡಳವನ್ನು ಖರೀದಿ ಸಂಸ್ಥೆಯಾಗಿ ನೇಮಿಸಿತ್ತು. ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 23 ಖರೀದಿ ಕೇಂದ್ರ ಸ್ಥಾಪಿಸಲಾಗಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಹೆಚ್ಚು ಮಳೆಯಾಗಿದ್ದು, ಹೆಸರು ಕಾಳು ಗುಣಮಟ್ಟ ಹಾಳಾಗಿದೆ. ಆದ್ದರಿಂದ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿ ಮಾಡುವ ಗುರಿ ತಲುಪಲು ಕಷ್ಟ ಸಾಧ್ಯ. ಬದಲಾಗಿ ರೈತರಿಗೆ ಅನುಕೂಲವಾಗುವ ಹೆಸರು ಕಾಳುಗಳ ಗುಣಮಟ್ಟದ ವರ್ಗೀಕರಣದ ಪ್ರತ್ಯೇಕ ಗ್ರೇಡ್‌ಗಳನ್ನು ಮಾಡಿ ಎಫ್.ಎ.ಕ್ಯೂ ಗುಣಮಟ್ಟದಲ್ಲಿ ಸಡಲಿಕೆ ಮಾಡಿ ದರ ನಿಗದಿಪಡಿಸಿ ಖರೀದಿ ಮಾಡಲು ಜಿಲ್ಲಾಧಿಕಾರಿಗಳು ಸೆ. 18ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ಕಾರದ ಮುಂದಿನ ನಿರ್ದೇಶನದ ಮೇರೆಗೆ ಕ್ರಮವಹಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಉಪನಿರ್ದೇಶಕ ವಿ.ಎಂ.ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಕ್ಷಸಿಯ ಆಡಳಿತ ವಿನಾಶವಾಗಿ ಪ್ರಜಾಪ್ರಭುತ್ವ ಗೆಲ್ಲಲಿ
ಕ್ಷೇತ್ರದಲ್ಲಿ 30 ಸಾವಿರ ಅನರ್ಹ ಮತ ರದ್ದಾಗುವ ಸಾಧ್ಯತೆ