ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದಿಂದ ತತ್ತರಿಸಿ, ಅಂತರ್ಜಲಮಟ್ಟ ಕುಸಿತವಾಗಿ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವ ಸಮಯದಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕಬ್ಬಿನ ಎಫ್‌ಆರ್‌ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ಕಡಿಮೆ ತೋರಿಸುವ ಕಾರಣ ಹೆಚ್ಚಿನ ಬೆಲೆ ಸಿಗಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ಕಬ್ಬು ಬೆಳೆಯುವ ರೈತರ ಗಾಯದ ಮೇಲೆ ತುಪ್ಪ ಸವರಿ ಬರೆ ಎಳೆದಿವೆ ಎಂದು ಆರೋಪಿಸಿದರು.
ಕಳೆದ ಎಂಟು ತಿಂಗಳಿಂದ ಸಕ್ಕರೆ ಕಾರ್ಖಾನೆಗಳು ಸುಮಾರು ₹ 700 ಕೋಟಿ ಕಬ್ಬಿನ ಹಣ ರೈತರಿಗೆ ಪಾವತಿಸಿಲ್ಲ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಇಂಥ ಕಾರ್ಖಾನೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಬೇಕು. ಇಂತಹ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.ರಾಜ್ಯದಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಲೀ.ಗೆ ಐದು ರು. ಎಂಟು ತಿಂಗಳಿಂದ ಬಿಡುಗಡೆಯಾಗಿಲ್ಲ. ಸುಮಾರು ₹ 750 ಕೋಟಿ ಹಣ ಕೂಡಲೇ ಬಿಡುಗಡೆ ಮಾಡಿ ಹೈನುಗಾರಿಕೆ ಮಾಡುವ ರೈತರನ್ನು ರಕ್ಷಿಸಬೇಕು. ಹಸುಗಳ ತಿಂಡಿ, ಆಹಾರ, ದುಬಾರಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಳಪೆ ರಸಗೊಬ್ಬರ ಕೀಟನಾಶಕ, ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಜಾಮೀನು ರಹಿತ ಬಂಧನ ಮಾಡುವ ಕಠಿಣ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಸುರೇಶ್ ಪಾಟೀಲ್. ಜಿಲ್ಲಾಧ್ಯಕ್ಷ ಗುರುಸಿದ್ದಪ್ಪ ಕೋಟಗಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಕಾರ್ಯದರ್ಶಿ ಎಸ್.ಬಿ.ಸಿದ್ದಾಳ್, ಧಾರವಾಡ ಜಿಲ್ಲೆ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ, ರಮೇಶ್ ಹಿರೇಮಠ, ಶಾಸಪ್ಪ ನಾವಿ ಇತರರು ಇದ್ದರು.------------
ರಾಜ್ಯ ಸರ್ಕಾರ ರೈತರಿಗೆ ನೀಡುವ ಸವಲತ್ತುಗಳನ್ನು ಆಪ್‌ಗಳ ಮೂಲಕ ವಿತರಿಸುತ್ತಿದೆ. ಆದರೆ ₹ 25 ಸಾವಿರ ಕೋಟಿ ವಹಿವಾಟು ನಡೆಸುವ ಸಕ್ಕರೆ ಕಾರ್ಖಾನೆಗಳ ವ್ಯವಹಾರ ಆಪ್ ಮೂಲಕ ಯಾಕೆ ಮಾಡುತ್ತಿಲ್ಲ. ಕಬ್ಬು ಬೆಳೆಗಾರರ ದ್ವಿಪಕ್ಷೀಯ ಒಪ್ಪಂದ, ಕಬ್ಬಿನ ತೂಕ ಸಂದೇಶ, ಕಬ್ಬಿನ ಹಣ ಪಾವತಿ ಸಂದೇಶ, ಸಕ್ಕರೆ ಇಳುವರಿ ಸಂದೇಶ ನೀಡುವ ಆಪನ್ನು ಸಿದ್ದಗೊಳಿಸಲಾಗಿದ್ದರೂ, ರಾಜ್ಯ ಸರ್ಕಾರ ಯಾಕೆ ಜಾರಿ ಮಾಡಿಲ್ಲ.
-----------------------------
ಬೆಳೆಸಾಲ ಮನ್ನಾ ಮಾಡುವ ನೀತಿ ಜಾರಿ ಮಾಡಿ