ಬೆಲೆ ವ್ಯತ್ಯಾಸದ ಮೊತ್ತ ಡಿಬಿಟಿ ಮೂಲಕ ಪಾವತಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

KannadaprabhaNewsNetwork |  
Published : Jan 08, 2026, 02:15 AM IST
7ಜಿಡಿಜಿ14 | Kannada Prabha

ಸಾರಾಂಶ

ಈ ಯೋಜನೆಯಿಂದ ಪ್ರತಿ ಎಕರೆಗೆ 12 ಕ್ವಿಂಟಲ್‌ನಂತೆ, ಫ್ರುಟ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ 50 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಬೇಕು.

ಗದಗ: ಪ್ರಸಕ್ತ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ (ಪಿಡಿಪಿಎಸ್) ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಮಾರುಕಟ್ಟೆ ಮಧ್ಯ ಪ್ರವೇಶ ದರ ಪ್ರತಿ ಕ್ವಿಂಟಲ್ ಗೆ ₹2150ರಂತೆ ಸರ್ಕಾರ ಜ. 4ರಿಂದ ಆದೇಶ ಹೊರಡಿಸಿದೆ. ಮೆಕ್ಕೆಜೊಳವನ್ನು ರಾಜ್ಯ ಸಹಕಾರಿ ಮಾರಾಟ ಮಂಡಳ ನಿಯಮಿತ ಮುಖಾಂತರ ಖರೀದಿಸಲು ತಿಳಿಸಿದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಪ್ರತಿ ಕ್ವಿಂಟಲ್‌ಗೆ ₹1,900ಗೆ ವಹಿವಾಟಾಗುತ್ತಿದ್ದು ವ್ಯತ್ಯಾಸದ ಮೊತ್ತ ₹250 ಅನ್ನು ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ತಲುಪಿಸುವ ಕ್ರಮ ಸರಿಯಾಗಿ ಆಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಇತ್ತೀಚೆಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮೆಕ್ಕೆಜೋಳ ಉತ್ಪನ್ನವನ್ನು ಜಿಲ್ಲೆ ವ್ಯಾಪ್ತಿಯ ಕೃಷಿ ಉತ್ಪನ್ನ ಮಾರುಕಟ್ಟೆ, ಉಪ ಮಾರುಕಟ್ಟೆಗಳಲ್ಲಿ ಯುಎನ್‌ಪಿ ವೇದಿಕೆ ಮೂಲಕ 3.86 ಲಕ್ಷ ಕ್ವಿಂಟಲ್ ಪ್ರಮಾಣದಲ್ಲಿ ಸರ್ಕಾರದ ಆದೇಶದನ್ವಯ ವಹಿವಾಟು ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಈ ಯೋಜನೆಯಿಂದ ಪ್ರತಿ ಎಕರೆಗೆ 12 ಕ್ವಿಂಟಲ್‌ನಂತೆ, ಫ್ರುಟ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ 50 ಕ್ವಿಂಟಲ್‌ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಬೇಕು. ಮೆಕ್ಕೆಜೋಳದ ಎಫ್.ಎ.ಕ್ಯೂ. ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಿ ದೃಢೀಕರಿಸಲು ತಾಂತ್ರಿಕ ಅಧಿಕಾರಿಗಳನ್ನು ನೇಮಿಸಬೇಕು ಎಂದರು.

ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ರಾಜ್ಯಾದ್ಯಂತ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಸಹಕಾರ ಮಾರಾಟ ಮಂಡಳ ಮತ್ತು ಎಪಿಎಂಸಿ ಸಮಿತಿಯ ಕಾರ್ಯದರ್ಶಿಗಳು ದಿನಂಪ್ರತಿ ಆವಕವಾಗುವ ಮೆಕ್ಕೆಜೋಳದ ಉತ್ಪನ್ನದ ಪ್ರಮಾಣ ವಹಿವಾಟಾದ ಪ್ರಮಾಣ ಮತ್ತು ರೈತರ ಸಂಖ್ಯೆ ಇತ್ಯಾದಿ ವಿವರಗಳನ್ನು ಅಂದಿನ ದಿನವೇ ಯುಎಂಪಿ ವೇದಿಕೆಯಲ್ಲಿ ತಪ್ಪದೇ ಇಂದೀಕರಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ಈ ಯೋಜನೆಯ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ, ನರಗುಂದ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.

ಈ ವೇಳೆ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಕಾರ ಸಂಘಗಳ ಇಲಾಖೆ ಅಧಿಕಾರಿಗಳು, ಮಾರ್ಕೆಟಿಂಗ್ ಫೆಡರೇಷನ್ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂಗಳು ಎಲ್ಲಿಯೂ ಯಾರ ಮೇಲೆ ದಾಳಿ ಮಾಡಿಲ್ಲ: ಸುಧೀರ ಸಿಂಹ ಘೋರ್ಪಡೆ
ಮಾನವ ಧರ್ಮದ ಉನ್ನತಿಗೆ ಶ್ರಮಿಸಿದ ರೇಣುಕಾಚಾರ್ಯರು