ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಸಿ

KannadaprabhaNewsNetwork |  
Published : Sep 04, 2026, 02:15 AM IST
ಪೋಟೋ 3 : ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳ್ಳಗೆರೆ ಗ್ರಾಮದಲ್ಲಿ ವರ್ಮಿ ಫಿಲ್ಟರ್ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಬೆಂ.ಗ್ರಾ. ಜಿ.ಪಂ.ಸಿಇಒ ಡಾ. ವಾಸಂತಿ ಅಮರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಪಂ ವ್ಯಾಪ್ತಿಯ ಬಳ್ಳಗೆರೆ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಕೈಗೊಂಡಿರುವ ವರ್ಮಿ ಫಿಲ್ಟರ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ. ವಾಸಂತಿ ಅಮರ್ ಭೇಟಿ ನೀಡಿ ಪರಿಶೀಲಿಸಿದರು

ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಪಂ ವ್ಯಾಪ್ತಿಯ ಬಳ್ಳಗೆರೆ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಕೈಗೊಂಡಿರುವ ವರ್ಮಿ ಫಿಲ್ಟರ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ. ವಾಸಂತಿ ಅಮರ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಗ್ರಾಮದಲ್ಲಿ ಬಿ-ಜಿ ರಾಮ್ ಜಿ ಯೋಜನೆಯಡಿ ಕುರಿ, ಮೇಕೆ, ಹಸು ಶೆಡ್ ಕಾಮಗಾರಿಗಳ ನಿರ್ಮಾಣದ ಬಗ್ಗೆ ಸಾರ್ವಜನಿಕರ ಜೊತೆಗೆ ಚರ್ಚಿಸಿದರು. ಈ ಯೋಜನೆಯಡಿ ದಿನಕ್ಕೆ ₹382 ಕೂಲಿ ಪಡೆಯಬಹುದಾಗಿದ್ದು, 318 ವಿಧದ ಕಾಮಗಾರಿಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿದೆ ಎಂದು ಕಾರ್ಮಿಕರಿಗೆ ಮಾಹಿತಿ ನೀಡಿದರು.

ಗ್ರಾಪಂ ಮಟ್ಟದಲ್ಲಿ ಉದ್ಯೋಗ ಬೇಡಿಕೆಗೆ ಅನುಗುಣವಾಗಿ ಕಾಮಗಾರಿಗಳನ್ನು ಪೂರ್ವಭಾವಿಯಾಗಿ ಗುರುತಿಸಿ, ಉದ್ಯೋಗದ ನಿರಂತರತೆ ಕಾಪಾಡಬೇಕು. ಹಿರಿಯರು, ಮಹಿಳೆಯರು ಹಾಗೂ ಕಾರ್ಮಿಕರ ದೈಹಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಹಂಚಿಕೆ ಮಾಡಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ಕಾರ್ಮಿಕರಿಗೆ ನಿಯಮಾನುಸಾರ ಲಭ್ಯವಿರುವ ಶೇ.50ರಷ್ಟು ಕೆಲಸದ ವಿನಾಯಿತಿ ಕುರಿತು ಅರಿವು ಮೂಡಿಸುವಂತೆ ಗ್ರಾಪಂ ಪಿಡಿಒ ಸಾವಿತ್ರಮ್ಮ ಅವರಿಗೆ ಸೂಚಿಸಿದರು.

ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ಹಾಜರಾತಿ, ದಾಖಲೆ ನಿರ್ವಹಣೆ ಹಾಗೂ ವೇತನ ಪಾವತಿ ಪ್ರಕ್ರಿಯೆಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು. ಪ್ರಸ್ತುತ ನಡೆಯುತ್ತಿರುವ ಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಗರಿಷ್ಠ ಮೂರು ವಾರಗಳೊಳಗೆ ಪೂರ್ಣ ಮಾಡಬೇಕು. ಕಾಮಗಾರಿ ಪೂರ್ಣಗೊಂಡ ತಕ್ಷಣ ಎಂ.ಬಿ. ದಾಖಲಾತಿ ಹಾಗೂ ಬಾಕಿ ಹಣ ಬಿಡುಗಡೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.

ಜಲಸಂರಕ್ಷಣೆ, ಕೆರೆ–ಕಾಲುವೆಗಳ ಪುನಶ್ಚೇತನ ಹಾಗೂ ಕೃಷಿ ಭೂಮಿಗೆ ನೀರು ಹರಿಸುವ ವ್ಯವಸ್ಥೆಯಂತಹ ದೀರ್ಘಕಾಲಿಕ ಸಾರ್ವಜನಿಕ ಪ್ರಯೋಜನ ನೀಡುವ ಕಾಮಗಾರಿಗಳಿಗೆ ಆದ್ಯತೆ ನೀಡುವುದರ ಜೊತೆಗೆ ಕಾಮಗಾರಿಗಳ ಆರಂಭದಿಂದ ಪೂರ್ಣಗೊಳ್ಳುವವರೆಗೆ ನಿರಂತರ ಮೇಲ್ವಿಚಾರಣೆ, ಗುಣಮಟ್ಟ ಹಾಗೂ ಸಮಯಪಾಲನೆ ಖಚಿತಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಜೆಎಂ ಕಾಮಗಾರಿಗಳ ಅನುಷ್ಠಾನ ಹಾಗೂ ಕುಡಿಯುವ ನೀರು ಸಮರ್ಪಕ ನಿರ್ವಹಣೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ಪಿಡಿಒ ಸಾವಿತ್ರಮ್ಮ ಸೇರಿದಂತೆ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ 3 :

ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಪಂ ವ್ಯಾಪ್ತಿಯ ಬಳ್ಳಗೆರೆ ಗ್ರಾಮದಲ್ಲಿ ವರ್ಮಿ ಫಿಲ್ಟರ್ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಬೆಂ.ಗ್ರಾ. ಜಿಪಂ ಸಿಇಒ ಡಾ. ವಾಸಂತಿ ಅಮರ್ ಭೇಟಿ ನೀಡಿ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಶಾಸಕ ಬೇಳೂರು
ಸದಸ್ಯರು ಸಂಘದ ಮೂಲಕವೇ ವ್ಯಾಪಾರ ನಡೆಸಿ: ರಾಜಶೇಖರ್