ಪಿಡಿಒಗಳು ನಿಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಿ

KannadaprabhaNewsNetwork |  
Published : Sep 04, 2025, 02:00 AM IST
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರು ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಅಂದಾಗ ಮಾತ್ರ ಕೆಲಸಗಳು ಬಾಕಿ ಉಳಿಯುವುದಿಲ್ಲ. ತಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳುವ ಅಗತ್ಯವಿದೆ. ಇಲ್ಲವಾದಲ್ಲಿ ಗ್ರಾಮಗಳ ಅಭಿವೃದ್ಧಿ ಹೊಂದಲು ಸಾಧ್ಯವಾಗದು ಎಂದು ತಿಳಿಸಿದರು.

ತಮ್ಮ ಹಂತದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಸರಿಯಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸುವ ಕಾರ್ಯವಾಗಬೇಕು. ಮಕ್ಕಳ ಸಭೆ, ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಮೂಲ ಸೌಲಭ್ಯ ಇರುವ ಬಗ್ಗೆ ಪರಿಶೀಲಿನೆ ಮಾಡುವುದು, ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನ ಬಿಸಿಊಟ, ಶೌಚಾಲಯ ವ್ಯವಸ್ಥೆ ಇರುವ ಬಗ್ಗೆ ಗಮನ ಹರಿಸಬೇಕು. ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬಂದು ಪಾಠ ಬೋಧನೆ ಮಾಡುತ್ತಿರುವ ಬಗ್ಗೆ ಹಾಗೂ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದ ಅವರು ಅನುಮತಿ ಪಡೆಯದೇ ಸಭೆಗೆ ಗೈರು ಹಾಜರಾದ ಪಿಡಿಒಗಳಿಗೆ ನೋಟಿಸ್ ನೀಡಲು ಸೂಚನೆ ನೀಡಿದರು. ಇ-ಗ್ರಾಮ ಸ್ವರಾಜ ಅಡಿಯಲ್ಲಿ ಸರ್ವೇ ಕಾರ್ಯಕ್ಕೆ ಬಾಕಿ ಉಳಿಸಿಕೊಂಡ ಬಿಲ್ ಪಾವತಿಗೆ ಬುಧವಾರ ಸಂಜೆವರೆಗೆ ಗುಡುವು ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿ ಸೋಮವಾರ ಅಭಿಯಾನ ಹಮ್ಮಿಕೊಂಡು ಕರ ಸಂಗ್ರಹಣೆಗೆ ಮುಂದಾಗಬೇಕು. ಪ್ರತಿ ತಿಂಗಳು 15ನೇ ತಾರೀಖಿಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದ್ದು, ಜಿಲ್ಲಾ ಪಂಚಾಯತಿಯಿಂದ ವಸೂಲಿಗೆ ಗುರಿ ನಿಗದಿಪಡಿಸಲಾಗಿದೆ. ಇದನ್ನು ಅರಿತು ಕರ ವಸೂಲಾತಿಗೆ ಕ್ರಮವಹಿಸಲು ತಿಳಿಸಿದರು. ಜಿಲ್ಲಾ ಪಂಚಾಯಿತಿಯ ಪ್ರತಿಯೊಂದು ವಿಭಾಗದಿಂದ ಯಾವ ಗ್ರಾಮ ಪಂಚಾಯಿತಿ ಎಷ್ಟು ಪ್ರಗತಿ ಸಾಧಿಸಿದೆ ಎಂಬ ಮಾಹಿತಿ ರವಾನೆ ಮಾಡಲಾಗುತ್ತಿದೆ. ಈ ಮಾಹಿತಿ ನೋಡಿ ಯಾಗ ವಿಭಾಗದಲ್ಲಿ ಪ್ರಗತಿ ಕುಂಟಿತವಾಗಿದೆ ಎಂಬುದನ್ನು ಅರಿವು ಪ್ರಗತಿ ಸಾಧಿಸಲು ಮುಂದಾಗಬೇಕು ಎಂದು ಹೇಳಿದರು.

ನಂತರ ನಿಗದಿತ ಅವಧಿಯಲ್ಲಿ ಕೂಲಿ ಪಾವತಿ, ಅಟಲ್ ಭೂಜಲ, ಸವಳು ಜವಳು ಭೂಮಿ ಅಭಿವೃದ್ಧಿ, ಬಾಪೂಜಿ ಸೇವಾ ಕೇಂದ್ರ, 14 ಮತ್ತು 15ನೇ ಹಣಕಾಸು ಪ್ರಗತಿ, ಇ-ಸ್ವತ್ತು ಅರ್ಜಿ ವಿಲೇವಾರಿ, ದಿನದ 24 ಗಂಟೆಗಳ ನೀರು ಸರಬರಾಜು, ಡಿಜಿಟಲ್ ಲೈಬ್ರರಿ, ಸ್ವಚ್ಛ ಭಾರತ ಮಿಷನ್, ವಸತಿ ಯೋಜನೆ, ಜಲಜೀವನ ಮಿಷನ್ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಎಸ್.ಎಂ.ಕಾಂಬಳೆ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಎಲ್ಲ ತಾಲೂಕು ಪಂಚಾತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

--ಕೋಟ್

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿಕ್ಷಿತ ಮಟ್ಟದಲ್ಲಿ ಕರ ಸಂಗ್ರಹ ಆಗುತ್ತಿಲ್ಲ. ಹುನಗುಂದ ಮತ್ತು ಇಳಕಲ್ಲ ತಾಲೂಕು ಕೇವಲ ಶೇ.35ರಷ್ಟು ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿದರೆ, ಉಳಿದ ತಾಲೂಕುಗಳು ಶೇ.40ಕ್ಕಿಂತ ಹೆಚ್ಚಿಗೆ ಪ್ರಗತಿ ಸಾಧಿಸಿವೆ. ಪ್ರತಿಯೊಂದು ಪ್ರಗತಿಯಲ್ಲಿ ಹಿಂದೆ ಇದ್ದಾರೆ. ಈ ಬಗ್ಗೆ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಂಡು ಕೆಲಸದಲ್ಲಿ ಚುರುಕುಗೊಳ್ಳಬೇಕು. ಇಲ್ಲವಾದಲ್ಲಿ ಕ್ರಮಕ್ಕೆ ಮುಂದಾಗಬೇಕಾಗುತ್ತದೆ.

- ಶಶಿಧರ ಕುರೇರ್ ಜಿಲ್ಲಾ ಪಂಚಾಯಿತಿ ಸಿಇ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!