ಕನ್ನಡಪ್ರಭ ವಾರ್ತೆ ಉಳ್ಳಾಲ
ಅವರು ಬುಧವಾರ ಕೊಣಾಜೆ ಸಪ್ತಸ್ವರ ಕಲಾ ತಂಡ ಸೇವಾ ಟ್ರಸ್ಟ್ ಹಾಗೂ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಹಕಾರದೊಂದಿಗೆ 20ನೇ ವರ್ಷದ ‘ಕೊಣಾಜೆ ಶಾರದೋತ್ಸವ’ ಕಾರ್ಯಕ್ರಮದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಗೀತ, ನೃತ್ಯ ಸೇರಿದಂತೆ ನಮ್ಮಲ್ಲಿ 64 ಕಲಾ ಪ್ರಕಾರಗಳಿವೆಯಂತೆ. ಕೊಣಾಜೆಯ ಸಪ್ತಸ್ವರ ಕಲಾತಂಡವು ಧಾರ್ಮಿಕ ಆಚರಣೆಯೊಂದಿಗೆ ಯಕ್ಷಗಾನ, ಭರತನಾಟ್ಯ, ಸಂಗೀತ ಸೇರಿದಂತೆ ಅನೇಕ ಪ್ರಕಾರಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿವೆ. ಜೊತೆಗೆ ಸಮಾಜಸೇವೆಯಲ್ಲೂ ಮೂಂಚೂಣಿಯಲ್ಲಿದ್ದು ಮಾದರಿ ಸಂಸ್ಥೆಯಾಗಿ ಗುರುತಿಸಿದೆ ಎಂದರು.ಕೊಣಾಜೆ ಶಾರದೋತ್ಸವ ಸಮಿತಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ, ಒಳ್ಳೆಯತನವು ನಮ್ಮನ್ನು ಎತ್ತರಕ್ಕೆ ಬೆಳೆಸುತ್ತದೆ. ಧಾರ್ಮಿಕತೆಯೊಂದಿಗೆ ಸಮಾಜಮುಖಿ ಚಿಂತನೆಗಳು ನಮ್ಮಲ್ಲಿ ಸದಾ ಜಾಗೃತವಾಗಿರಬೇಕು ಎಂದ ಅವರು, ಜೀವನದಲ್ಲಿ ಗಳಿಸಿದ್ದರಲ್ಲಿ ಸ್ವಲ್ಪ ಭಾಗವಾದರೂ ಸಮಾಜಕ್ಕೆ ಅರ್ಪಿಸುವ ಮನೋಭಾವನೆಯೊಂದಿಗೆ ಇಲ್ಲಿಯ ಸಮಿತಿಯ ಪದಾಧಿಕಾರಿಗಳು ದುಡಿಯುತ್ತಿರುವುದು ಸಂಸ್ಥೆಯ ಬೆಳವಣಿಗೆಗೆ ಕಾರಣವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕರಾದ ಶಂಕರ ಮಾಸ್ಟರ್ ಕುಂಟಲಗುಳಿ ಅವರಿಗೆ ಗ್ರಾಮ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಚಿತ್ರಕಲೆಯಲ್ಲಿ ಸಾಧನೆ ಮಾಡಿದ ರೋಹಿತ್ ಪಜೀರು, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭುವನ್, ತನ್ವಿ ಬಂಗೇರ ಅವರನ್ನು ಗೌರವಿಸಲಾಯಿತು.
ಸಮಿತಿಯ ಗೌರವ ಸಲಹೆಗಾರ ರವೀಂದ್ರ ರೈ ಕಲ್ಲಿಮಾರ್ ಸ್ವಾಗತಿಸಿದರು. ನಾರಾಯಣ ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಶರತ್ ಪುಳಿಂಚಾಡಿ ವಂದಿಸಿದರು. ಭಾಸ್ಕರ ಅಂಗಣೆಮಾರು ಕಾರ್ಯಕ್ರಮ ನಿರೂಪಿಸಿದರು. ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಕೊಣಾಜೆ ಶಾರದಾಂಭ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯಿತು.