ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಾ.ವೀರೇಂದ್ರ ಹೆಗ್ಗಡೆ

KannadaprabhaNewsNetwork |  
Published : Feb 27, 2025, 12:31 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಶಿವರಾತ್ರಿ ಆಚರಣೆ ಸಂಭ್ರಮ | Kannada Prabha

ಸಾರಾಂಶ

ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶಿವರಾತ್ರಿ ಅಂದರೆ ಪವಿತ್ರ ಹಾಗೂ ಮಂಗಳಕರ ರಾತ್ರಿ ಎಂದು ಅರ್ಥ. ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ ಕಳೆದು ಪುಣ್ಯ ಸಂಚಯವಾಗುತ್ತದೆ. ತ್ಯಾಗ ಮತ್ತು ವಿರಕ್ತಿಯಿಂದ ಶಾಂತಿ, ನೆಮ್ಮದಿ ಸಿಗುತ್ತದೆ. ಜಪ-ತಪ, ಧ್ಯಾನದೊಂದಿಗೆ ವ್ರತ ನಿಯಮಗಳ ಪಾಲನೆ ಮಾಡಿದಾಗ ಜೀವನ ಪಾವನವಾಗುತ್ತದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಬುಧವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶಿವಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ ನೀಡಿ ಅವರು ಶುಭ ಹಾರೈಸಿದರು.

‘ಮಾತು ಬಿಡ ಮಂಜುನಾಥ’ ಎಂಬ ಮಾತು ಪ್ರಚಲಿತವಿದೆ. ನಮ್ಮ ಮಾತು ಮತ್ತು ಕೃತಿಗೆ ಅಂತರವಿರಬಾರದು. ನುಡಿದಂತೆ ನಡೆಯಬೇಕು. ಆಗ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಎಲ್ಲವೂ ಸುಗಮವಾಗಿ ಜೀವನ ಪಾವನವಾಗುತ್ತದೆ ಎಂದು ಹೆಗ್ಗಡೆ ನುಡಿದರು.

ಬಳಿಕ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಆಹೋ ರಾತ್ರಿ ನಡೆಯಿತು.

ದೇವಸ್ಥಾನದಲ್ಲಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರಿಗೆ ಶತರುದ್ರಾಭಿಷೇಕ ಮತ್ತು ಸೀಯಾಳ ಅಭಿಷೇಕ ಸೇವೆ ಅರ್ಪಿಸಿದರು.

ಹೇಮಾವತಿ ವಿ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಬೆಂಗಳೂರಿನ ಹನುಮಂತಪ್ಪ ಗುರೂಜಿ, ಮರಿಯಪ್ಪ ಮತ್ತಿತರರು ಹಾಜರಿದ್ದರು.

ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಡಾ. ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!