ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಶಾಂತಿ: ಸತ್ಯಜಿತ್ ಸುರತ್ಕಲ್‌

KannadaprabhaNewsNetwork |  
Published : Mar 22, 2024, 01:11 AM IST
ಸುರತ್ಕಲ್ ನವದುರ್ಗಾ ಫ್ರೆಂಡ್ಸ್ ಸರ್ಕಲ್ ನಿಂದ ಧಾರ್ಮಿಕ ಸಭೆ | Kannada Prabha

ಸಾರಾಂಶ

ನವದುರ್ಗಾ ಫ್ರೆಂಡ್ಸ್ ಸರ್ಕಲ್ ರಥಬೀದಿ ಸುರತ್ಕಲ್ ವತಿಯಿಂದ ಶ್ರೀ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ಶಿಲಾಮಯ ಅಶ್ವತ್ಥಕಟ್ಟೆಯಲ್ಲಿ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಸಮಾಜದಲ್ಲಿ ಧಾರ್ಮಿಕ ಆಚರಣೆಗಳು ಮನಸ್ಸಿಗೆ ಶಾಂತಿ ನೀಡುತ್ತವೆ. ಧಾರ್ಮಿಕ ಕಾರ್ಯಗಳನ್ನು ಸಮಾಜದ ಎಲ್ಲ ವರ್ಗದ ಜನರು ಸೇರಿ ಆಚರಣೆ ಮಾಡಿದಾಗ ಅದಕ್ಕೊಂದು ವಿಶೇಷ ಅರ್ಥ ಬರುತ್ತದೆ ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ನ ಅಧ್ಯಕ್ಷ ಸತ್ಯಜಿತ್ ಸುರತ್ಕಲ್‌ ಹೇಳಿದರು.

ನವದುರ್ಗಾ ಫ್ರೆಂಡ್ಸ್ ಸರ್ಕಲ್ ರಥಬೀದಿ ಸುರತ್ಕಲ್ ವತಿಯಿಂದ ಶ್ರೀ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ಶಿಲಾಮಯ ಅಶ್ವತ್ಥಕಟ್ಟೆಯಲ್ಲಿ ಜರುಗಿದ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ವಹಿಸಿದ್ದರು. ಈ ಸಂದರ್ಭ ಯಕ್ಷಗಾನ, ನಾಟಕ, ಸಾಹಿತ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಮಾಧವ ಭಂಡಾರಿ ಕುಳಾಯಿ, ಪೊಲೀಸ್ ಇಲಾಖೆಯಲ್ಲಿದ್ದು ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಎಸ್ಐ ವಿಜಯ ಕಾಂಚನ್, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ವೆಂಕಟೇಶ್ ಶೆಟ್ಟಿ ಚೇಳಾರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಶೈಕ್ಷಣಿಕ , ಕ್ರೀಡೆ, ಚಿತ್ರಕಲೆ, ಎನ್.ಎಸ್.ಎಸ್, ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ನಿಹಾಲ್ ಕರ್ಕೆರ, ಅಲನ್ ಮೋನ್ಸಿ ಜೋಸೆಫ್, ರಿಷಿತಾ ಶೆಟ್ಟಿ, ಧನ್ಯಶ್ರೀ, ಆದಿತ್ಯ ಪಿಳ್ಳೆ, ಪ್ರಜ್ಞಾ, ದಿವ್ಯ, ಮಾನಸ, ಸಚಿನ್, ಚೈತನ್ಯ ಪೂಜಾರಿ ಯವರಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಉದ್ಯಮಿಗಳಾದ ಸತೀಶ್ ಮೈಸೂರು, ಮನೋಹರ್ ಶೆಟ್ಟಿ ಸೂರಿಂಜೆ, ಸಿದ್ಧಕಟ್ಟೆ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದತ್ತರಾಜ್ ಶೆಟ್ಟಿಗಾರ್, ರಿಧಂ ಫೌಂಡೇಶನಿನ ಸುಧಾಕರ ಸಾಲ್ಯಾನ್, ಮ.ನ.ಪಾ. ಸದಸ್ಯೆ ಶೋಭಾ ರಾಜೇಶ್ , ಶ್ರೀಕ್ಷೇತ್ರದ ಆಡಳಿತ ಸಮಿತಿಯ ಕೋಶಾಧಿಕಾರಿ ಓಂಪ್ರಕಾಶ್ ಕಡಂಬೋಡಿ, ಸಂಸ್ಥೆಯ ಅಧ್ಯಕ್ಷ ಹರೀಶ್ ಶೆಟ್ಟಿಗಾರ್ ಮತ್ತಿತರರಿದ್ದರು. ಸುರೇಂದ್ರ ಜಿ. ಸ್ವಾಗತಿಸಿ ನಿರೂಪಿಸಿದರು. ಶಿವಾನಂದ ಪಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!