ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ರೈತರ ಬೆಂಬಲ

KannadaprabhaNewsNetwork |  
Published : Feb 14, 2025, 12:34 AM IST
13ಕೆಬಿಪಿಟಿ.3.ಬಂಗಾರಪೇಟೆ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಗ ಮುಷ್ಕರಕ್ಕೆ ರೈತ ಸಂಘ ಬೆಂಬಲ ನೀಡಿ ಭಾಗವಹಿಸಿ್ದ್ದರು. | Kannada Prabha

ಸಾರಾಂಶ

ಈ ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿರುವ ಹಿನ್ನೆಲೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಾಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ತಕ್ಷಣವೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಯಿತು. ಆದರೆ, ಬೇಡಿಕೆಗಳು ಈಡೇರಿಸದ ಪ್ರಯುಕ್ತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ 23 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಾಲ್ಕು ದಿನಗಳಿಂದ ನಡೆಸುತ್ತಿರುವ ಮುಷ್ಕರಕ್ಕೆ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲವ್ಯಕ್ತಪಡಿಸಿ ಮುಷ್ಕರಕ್ಕೆ ಮತ್ತಷ್ಟು ಶಕ್ತಿ ತುಂಬಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮಾಡಳಿತಾಧಿಕಾರಿಗಳು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ೨ನೇ ಹಂತದ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಸಂಘಟನೆಯ ಮುಖಾಂತರ ಬೆಂಬಲ ಸೂಚಿಸಿ ಸಂಘದ ಜಿಲ್ಲಾಧ್ಯಕ್ಷ ಟಿ.ಎನ.ರಾಮೇಗೌಡ ಮಾತನಾಡಿದರು.

ಅನಿರ್ದಿಷ್ಟಾವಧಿ ಮುಷ್ಕರ

ಈ ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿರುವ ಹಿನ್ನೆಲೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಾಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ತಕ್ಷಣವೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಯಿತು. ಆದರೆ, ಇಂದಿಗೂ ಬೇಡಿಕೆಗಳು ಈಡೇರಿಸದ ಪ್ರಯುಕ್ತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರ ನಿಲ್ಲುವುದಿಲ್ಲ, ಈ ಮುಷ್ಕರಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು.

ಮೂಲ ಸೌಕರ್ಯಗಳಾದ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ನೀಡುವುದು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬಡ್ತಿ, ಸರ್ಕಾರದ ಎಲ್ಲ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದರಿಂದ ಸೂಕ್ತ ಕಾನೂನಾತ್ಮಕ ರಕ್ಷಣೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವವರೆಗೂ ವ್ಯಾಪ್ತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮುರಳಿ, ತಾಲ್ಲೂಕು ಸಂಚಾಲಕ ಮೋಹನ್, ಉಪಾಧ್ಯಕ್ಷ ಬಸಪ್ಪ, ನಾಗರಾಜು, ಮುನಿರಾಜು, ರಮೇಶ್, ವೆಂಕಟೇಶ್ ಹಾಗೂ ಗ್ರಾಮಾಡಳಿತ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ