ನಾಳೆಯಿಂದ ಕಪ್ಪತಗುಡ್ಡ ರಕ್ಷಣೆಗೆ ಪಾದಯಾತ್ರೆ

KannadaprabhaNewsNetwork |  
Published : Sep 18, 2024, 01:49 AM IST
ಸಸಸಸ | Kannada Prabha

ಸಾರಾಂಶ

ಸದಸ್ಯರು ಮತ್ತು ರೈತ ಹೋರಾಟಗಾರರು, ಮಹಿಳೆಯರು, ಹಿರಿಯ ನಾಗರಿಕರು ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ

ಗದಗ: ಕಳಸಾ-ಬಂಡೂರಿ, ಮಹದಾಯಿ ನದಿ ಜೋಡಣೆ ಹಾಗೂ ಕಪ್ಪತಗುಡ್ಡವನ್ನು ಪ್ರವಾಸಿ ತಾಣವನ್ನಾಗಿಸುವಂತೆ ನರಗುಂದ ಪಟ್ಟಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಸೆ.19 ರಿಂದ ನರಗುಂದ ಪಟ್ಟಣದ ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಹೋರಾಟ ಆರಂಭವಾಗಲಿದೆ ಎಂದು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ. ಆರ್. ಬೇಲೂರ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಶೆಟ್ಟಿ, ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ, ವಿಶ್ರಾಂತ ಗಣ್ಯ ವ್ಯಕ್ತಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ನಮ್ಮ ಪದಾಧಿಕಾರಿಗಳು, ಸದಸ್ಯರು ಮತ್ತು ರೈತ ಹೋರಾಟಗಾರರು, ಮಹಿಳೆಯರು, ಹಿರಿಯ ನಾಗರಿಕರು ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕುರ್ಲಕೇರಿ, ತಡಹಾಳ, ನಾಯಕನೂರ ಗ್ರಾಮದ ಮೂಲಕ ಶಲವಡಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಾಗುವುದು. ಸೆ. 20 ರಂದು ಶೆಲವಡಿ ಗ್ರಾಮದಿಂದ ತುಪ್ಪದಕುರಹಟ್ಟಿ, ವೆಂಕಟಾಪೂರ, ಹೊಂಬಳ ಮೂಲಕ ಗದಗ ಪ್ರವೇಶಿಸಿ ಹೊಂಬಳ ನಾಕಾ, ಗಂಗಾಪೂರಪೇಟೆ, ಡಿಸಿ ಮಿಲ್ ರೋಡ್, ತಹಸೀಲ್ದಾರ ಕಚೇರಿ, ಗಾಂಧಿ ಸರ್ಕಲ್, ಪುಟ್ಟರಾಜ ಸರ್ಕಲ್, ಬಸವೇಶ್ವರ ಸರ್ಕಲ್, ಬಿ.ಎಸ್.ಎನ್.ಎಲ್ ಟವರ್ ರೋಡ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮುತ್ತುರಾಜ. ಎಸ್.ಅರಗಿನಶೆಟ್ಟಿ, ತಿಮ್ಮಣ್ಣ.ಈ. ಡೋಣಿ, ವೆಂಕಟೇಶ್.ರಾ. ಬೇಲೂರ, ಮಂಜುನಾಥ.ವಿ.ಮೂತಿಮಠ, ಪರಶುರಾಮ ಬಂಕದಮನಿ, ರಾಜೇಶ್ ಡವಳೆ, ಹನಮಂತಸಾ ಶಿದ್ಲಿಂಗ ಮುಂತಾದವರು ಇದ್ದರು.

ಕನ್ನಡ ನಾಡು, ನುಡಿಗಾಗಿ ನಿರಂತರವಾಗಿ ನಾವು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕೊರೋನಾ ಸಮಯದಲ್ಲಿ ಎರಡು ವರ್ಷ ಹೋರಾಟಕ್ಕೆ ಸ್ವಲ್ಪ ವಿರಾಮ ನೀಡಿದ್ದೇವು. ಆದರೆ, ಈಗ ಮತ್ತೆ ಹೋರಾಟ ತೀವ್ರಗೋಳಿಸುತ್ತೇವೆ. ಮಹದಾಯಿ,ಕಳಸಾ-ಬಂಡೂರಿ ಹೋರಾಟದ ಜತೆಗೆ ಸ್ಥಳೀಯ ಸಮಸ್ಯೆಗಳ ನಿವಾರಣೆ ಬಗ್ಗೆ ಹೋರಾಟ ಮಾಡಲಿದ್ದೇವೆ. ಸೆ. 19 ರಂದು ನಡೆಯುವ ಪಾದಯಾತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ವಿವಿಧ ಸಂಘಟನೆಯ ಮುಖಂಡರು, ಮಠಾಧೀಶರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಬೆಳಗಾವಿ ವಿಭಾಗಿಯ ಅಧ್ಯಕ್ಷ ಪಾಪು ಧಾರೆ ತಿಳಿಸಿದ್ದಾರೆ.ಕಳಸಾ-ಬಂಡೂರಿ ನಾಲಾ ಜೋಡಣೆಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ರಾಜಕೀಯ ಇಚ್ಚಾಶಕ್ತಿಯ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಗೋವಾ, ಕರ್ನಾಟಕ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಈ ಯೋಜನೆ ಕೈಗೆತ್ತಿಕೊಳ್ಳಲು ಆಗಲಿಲ್ಲ. ಜತೆಗೆ ಕಪ್ಪತಗುಡ್ಡ ರಕ್ಷಣೆಗಾಗಿ ಹೋರಾಟದ ರೂಪರೇಷ ಸಿದ್ದಪಡಿಸಿದ್ದೇವೆ. ಸೆ. 19 ರಂದು ನರಗುಂದ ಪಟ್ಟಣದಿಂದ ಪಾದಯಾತ್ರೆ ನಡೆಸಲು ತಿರ್ಮಾನಿಸಲಾಗಿದೆ ಎಂದು ರಾ.ಕಾರ್ಯಕಾರಿ ಸಮಿತಿ ಸದಸ್ಯ ದಾವಲಸಾಬ್ ಮುಳಗುಂದ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ