4 ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್‌

KannadaprabhaNewsNetwork |  
Published : Apr 11, 2026, 02:00 AM IST
47 | Kannada Prabha

ಸಾರಾಂಶ

ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೆತುವೆ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಏ.13ರಿಂದ 17ರವರೆಗೆ ನಾಲ್ಕು ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗುವುದು

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೆತುವೆ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಏ.13ರಿಂದ 17ರವರೆಗೆ ನಾಲ್ಕು ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗುವುದು

ಮೇಲ್ಸೆತುವೆ ಮೇಲೆ ಅಳವಡಿಸಲಾದ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಅವುಗಳ ಪರಿಶೀಲಿಸಲು ಅಂತಿಮ ಲೋಡ್ ಟೆಸ್ಟಿಂಗ್ ನಡೆಸಬೇಕಾಗಿದೆ ಹೀಗಾಗಿ ಫ್ಲೈಓವರ್ ಮೇಲೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಚಾರ ಬಂದ್ ಆಗುವ ಸಮಯ:

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಏ.17ರ ಬೆಳಿಗ್ಗೆ 11 ಗಂಟೆಯವರೆಗೆ ಈ ಫ್ಲೈಓವರ್ ಸಾರ್ವಜನಿಕ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸಂಚಾರ ಭಾರೀ ವಾಹನಗಳು ಸೇರಿದಂತೆ ಎಲ್ಲ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ:

ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಪ್ರೈಓವರ್ ಮೇಲೆ ಕನ್ನಮೆಟಲ್ ವಿಡಿಯಾ ಅಪ್ಪರ್‌ ರಾಂಪ್‌ ಎಸ್.ಆರ್.ಎಸ್ ಡೌನ್‌ ರಾಂಪ್‌ವರೆಗೆ ಎರಡು ಕಡೆಯಲ್ಲಿ ಫೈಓವರ್ ಮೇಲೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

ನೆಲಮಂಗಲದಿಂದ ಬರುವ ವಾಹನಗಳು ಕನ್ನಮೆಟಲ್ ವಿಡಿಯಾ ಹತ್ತಿರ ಫ್ಲೈ ಓವರ್ ಕೆಳಭಾಗದ ಎನ್.ಎಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್ ಆರ್ ಎಸ್ ಜಂಕ್ಷನ್ ಮಾರ್ಗವಾಗಿ ಗೊರಗುಂಟೆಪಾಳ್ಯ ತಲುಪಬಹುದು.

ನೆಲಮಂಗಲದ ಕಡೆಗೆ ಹೋಗುವ ವಾಹನಗಳು ಫ್ಲೈ ಓವರ್ ಕೆಳಭಾಗದ ಎನ್.ಎಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆಯನ್ನು ಬಳಸಬೇಕು. ಎಸ್.ಆರ್.ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಪಾರ್ಲೆ ಜಿ ಟೋಲ್ ಮೂಲಕ ನೆಲಮಂಗಲದ ಕಡೆಗೆ ಸಾಗಬಹುದು. ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗುವ ಸಂಭವವಿರುವುದರಿಂದ, ಹೆಚ್ಚಿನ ಸಮಯ ಇಟ್ಟುಕೊಂಡು ಪ್ರಯಾಣ ಬೆಳೆಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋರ್ಟ್‌ನಲ್ಲಿ ವಾದ ಮಾಡುವಾಗಲೇ ಹೃದಯಾಘಾತದಿಂದ ವಕೀಲ ಸಾವು
ಹಿಟ್ನಾಳ-ಹುಲಿಗಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ