ಪೀಣ್ಯ ಮೇಲ್ಸೇತುವೆ ಇಂದಿನಿಂದ 8 ದಿನ ರಾತ್ರಿ ಸಂಚಾರ ನಿರ್ಬಂಧ

KannadaprabhaNewsNetwork |  
Published : Jul 28, 2026, 04:00 AM IST
Peenya Flyover

ಸಾರಾಂಶ

ಡಾಂಬರೀಕರಣ ಕಾಮಗಾರಿ ಹಿನ್ನಲೆಯಲ್ಲಿ ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ (ಡಾ.ಶ್ರೀಶಿವಕುಮಾರ ಸ್ವಾಮೀಜಿ) ಮೇಲ್ಸೇತುವೆಯಲ್ಲಿ ಎಂಟು ದಿನಗಳ ಕಾಲ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ಸಂಚಾರ ವಿಭಾಗದ ಪೊಲೀಸರು ನಿರ್ಬಂಧಿಸಿದ್ದಾರೆ.

 ಬೆಂಗಳೂರು :  ಡಾಂಬರೀಕರಣ ಕಾಮಗಾರಿ ಹಿನ್ನಲೆಯಲ್ಲಿ ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ (ಡಾ.ಶ್ರೀಶಿವಕುಮಾರ ಸ್ವಾಮೀಜಿ) ಮೇಲ್ಸೇತುವೆಯಲ್ಲಿ ಎಂಟು ದಿನಗಳ ಕಾಲ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ಸಂಚಾರ ವಿಭಾಗದ ಪೊಲೀಸರು ನಿರ್ಬಂಧಿಸಿದ್ದಾರೆ. ಈ ತಾತ್ಕಾಲಿಕ ಸಂಚಾರ ವ್ಯವಸ್ಥೆ ಬದಲಾವಣೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.

ಜು.27 ರಿಂದ ಆ.5ರವರೆಗೆ

ಜು.27 ರಿಂದ ಆ.5ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗೆ 5 ಗಂಟೆಯವರೆಗೆ ಹಾಗೂ ಈ ಅವಧಿಯ ಶನಿವಾರ ಮತ್ತು ಭಾನುವಾರ ರಾತ್ರಿ 12 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮೇಲ್ಸೇತುವೆಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಪೊಲೀಸರು ನಿಷೇಧಿಸಿದ್ದಾರೆ.

ಪರ್ಯಾಯ ಮಾರ್ಗ

 ನೆಲಮಂಗಲದಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಹತ್ತಿರ ಫೈಓವರ್ ಕೆಳಭಾಗದ ಎನ್.ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ ತಲುಪಬೇಕು. ಅಲ್ಲಿಂದ ದಾಸರಹಳ್ಳಿ ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ನಿಂದ ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮೆಟ್ರೋಹಳಿಗೆ ಹಾರಿ ಪತ್ರಕರ್ತ ಆತ್ಮ*ತ್ಯೆ