ಕದಳೀಪ್ರಿಯ ದೇವರಿಗೆ ಕದಳೀಮೇಳ ಆಮಂತ್ರಣ ಸಮರ್ಪಣೆ

KannadaprabhaNewsNetwork |  
Published : Nov 16, 2026, 02:30 AM IST
15ಪೆರ್ಡೂರು | Kannada Prabha

ಸಾರಾಂಶ

ಸೋದೆ ಶ್ರೀ ವಾದಿರಾಜ ಮಠದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಬಾಳೆ ಮೇಳ - ಕದಳೀ ವಿಶ್ವದರ್ಶನದ ಆಮಂತ್ರಣ ಪತ್ರಿಕೆಗಳ ವಿತರಣಾ ಕಾರ್ಯಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪೆರ್ಡೂರು: ಸೋದೆ ಶ್ರೀ ವಾದಿರಾಜ ಮಠದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಬಾಳೆ ಮೇಳ - ಕದಳೀ ವಿಶ್ವದರ್ಶನದ ಆಮಂತ್ರಣ ಪತ್ರಿಕೆಗಳ ವಿತರಣಾ ಕಾರ್ಯಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮೇಳದ ಮೊದಲ ಆಮಂತ್ರಣ ಪತ್ರಿಕೆಯನ್ನು ಕದಳೀಪ್ರಿಯ ದೇವರಾದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವರಿಗೆ ಭಕ್ತಿಪೂರ್ವಕವಾಗಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶ್ರೀಪಾದರ ಸಂಕಲ್ಪದಂತೆ ಕದಳೀ ವಿಶ್ವದರ್ಶನ ಕಾರ್ಯಕ್ರಮವು ನಿರ್ವಿಘ್ನವಾಗಿ ಹಾಗೂ ಯಶಸ್ವಿಯಾಗಿ ನೆರವೇರಲೆಂದು ಹಾರೈಸಿದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಲಾಲ್ ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರಲ್ಲಿ ದೇಶಪ್ರೇಮ, ಸಾಮಾಜಿಕ ಹೊಣೆ ಮೇಳೈಸಲಿ
ಹಿಂದೂ ಅಲ್ಪ ಸಂಖ್ಯಾತರಾದರೆ ಅಪಾಯ ಕಟ್ಟಿಟ್ಟ ಬುತ್ತಿ: ಕೃಷ್ಣಾನಂದ ಕಾಮತ್‌