ಪಿಂಚಣಿ ಯೋಜನೆ, ರಾಜ್ಯ ಸರ್ಕಾರದ ಆದೇಶದಿಂದ ಅನ್ಯಾಯ: ಹನುಮಂತಪ್ಪ

KannadaprabhaNewsNetwork |  
Published : Jan 28, 2024, 01:16 AM IST
ಚಿತ್ರಹನುಮಂತಪ್ಪ.ಜಿ (ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ) | Kannada Prabha

ಸಾರಾಂಶ

ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ

ಕನ್ನಡಪ್ರಭ ವಾರ್ತೆ ಗುತ್ತಲ

ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ಜಿ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡುವುದಾಗಿ ಕಾಂಗ್ರೆಸ್‌ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿತ್ತು. ನಿಶ್ಚಿತ ಪಿಂಚಣಿ ಸೌಲಭ್ಯಕ್ಕಾಗಿ ಸುಮಾರು 3 ಲಕ್ಷ ನೌಕರರು ಸುದೀರ್ಘ ಹೋರಾಟ ಮಾಡಿಕೊಂಡು ಬಂದಿದ್ದೆವು. ಆದರೆ ಪ್ರಸ್ತುತ ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಖಾಸಗಿ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ 2006 ಏ. 1ಕ್ಕಿಂತ ಮುಂಚಿತವಾಗಿ ನೇಮಕವಾಗಿ ತದನಂತರ ಅನುದಾನಕ್ಕೆ ಒಳಪಟ್ಟ ಸಾವಿರಾರು ನೌಕರರಿಗೆ ಈ ಸೌಲಭ್ಯ ಅನ್ವಯವಾಗಿರುವುದಿಲ್ಲ. 2006 ಏ. 1ಕ್ಕಿಂತ ಮುಂಚಿತವಾಗಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರಾಗಿ, ಅರೆಕಾಲಿಕ ಶಿಕ್ಷಕರಾಗಿ, ಅತಿಥಿ ಉಪನ್ಯಾಸಕರಾಗಿ, ದಿನಗೂಲಿ ನೌಕರರಾಗಿ, ಗುತ್ತಿಗೆ ಆಧಾರದ ಶಿಕ್ಷಕರು ಮತ್ತು ನೌಕರರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, 2006 ಏ. 1ರ ನಂತರ ಕಾಯಂ ಆದ ಸಾವಿರಾರು ನೌಕರರಿಗೆ ಈ ಸೌಲಭ್ಯ ಅನ್ವಯವಾಗಿರುವುದಿಲ್ಲ.

ಕೆಲವೇ ಕೆಲವು ನೌಕರರಿಗೆ ಅನ್ವಯಿಸಿ ಮಾಡಿರುವ ಈ ಆದೇಶವನ್ನು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಸ್ವಾಗತ ಮಾಡುವುದಿಲ್ಲ ಮತ್ತು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಈ ಕೂಡಲೇ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ಈ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯವನ್ನು ನೀಡುವ ಮೂಲಕ ಆದೇಶ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ