60 ವರ್ಷ ಮೇಲ್ಪಟ್ಟವರು ಆರೋಗ್ಯದ ಕಡೆ ಗಮನ ಹರಿಸಬೇಕು: ನ್ಯಾ.ಆರ್.ಮಹೇಶ್

KannadaprabhaNewsNetwork |  
Published : Oct 13, 2025, 02:01 AM IST
11ಕೆಎಂಎನ್ ಡಿ17 | Kannada Prabha

ಸಾರಾಂಶ

ಆರೋಗ್ಯವೇ ಎಲ್ಲರಿಗೂ ನಿಜವಾದ ಭಾಗ್ಯ. ಹಿರಿಯರು ಕುಟುಂಬದ ಇತರರೊಂದಿಗೆ ಹೊಂದಾಣಿಕೆಯಿಂದ ಇದ್ದು, ಪ್ರೀತಿ ಸ್ನೇಹದಿಂದ ವ್ಯವಹರಿಸಬೇಕು. ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಬೇಕಾದ ಗೌರವ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪ್ರತಿಯೊಬ್ಬರು 60 ವರ್ಷದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಗಮನಹರಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಆರ್.ಮಹೇಶ್ ತಿಳಿಸಿದರು.

ಪಟ್ಟಣದ ವಿಜಯ ಬಿ.ಇಡಿ.ಕಾಲೇಜು ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ವಿಜಯ (ಬಿ.ಇಡಿ) ಕಾಲೇಜು, ನಿವೃತ್ತ ನೌಕರರ ಸಹಕಾರ ಸಂಘ ಆಶ್ರಯದಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಹಿರಿಯ ನಾಗರಿಕರ ದಿನದ ಅಂಗವಾಗಿ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದೆ. ಇದು ಸರಿಯಲ್ಲ. ಹಿರಿಯ ನಾಗರಿಕರನ್ನು ಗೌರವದಿಂದ ಕಾಣಬೇಕು. ಅವರನ್ನು ಕಡೆಗಣಿಸದೇ ಕಾಳಜಿ ವಹಿಸಿ ಒಂಟಿತನ ಕಾಡದೇ ಹಾಗೆ ನೋಡಿಕೊಳ್ಳಬೇಕು ಎಂದರು.

ಆರೋಗ್ಯವೇ ಎಲ್ಲರಿಗೂ ನಿಜವಾದ ಭಾಗ್ಯ. ಹಿರಿಯರು ಕುಟುಂಬದ ಇತರರೊಂದಿಗೆ ಹೊಂದಾಣಿಕೆಯಿಂದ ಇದ್ದು, ಪ್ರೀತಿ ಸ್ನೇಹದಿಂದ ವ್ಯವಹರಿಸಬೇಕು. ಸಮಾಜದಲ್ಲಿ ಹಿರಿಯ ನಾಗರಿಕರಿಗೆ ಬೇಕಾದ ಗೌರವ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದರು.

ಪ್ರಾಂಶುಪಾಲ ಡಾ.ಎನ್.ಕೆ.ವೆಂಕಟೇಗೌಡ ಮಾತನಾಡಿ, ಸರ್ಕಾರ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಡಿ ಹಿರಿಯ ನಾಗರಿಕರ ಕ್ಷೇಮ, ಶ್ರೇಯೋಭಿವೃದ್ದಿ ಹಾಗೂ ನೆಮ್ಮದಿ ಜೀವನಕ್ಕಾಗಿ ಹಲವು ಸೌಲಭ್ಯಗಳಿವೆ. ಹಿರಿಯರ ಮೇಲೆ ದಬ್ಬಾಳಿಕೆ, ದೌರ್ಜನ್ಯ ವಂಚಿಸುವುದು, ಆಸ್ತಿ ಪಡೆದು ಮನೆಯಿಂದ ಹೊರ ಹಾಕುವುದು ಕಂಡುಬಂದರೆ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಕಾಗುವುದು ಎಂದು ಎಚ್ಚರಿಸಿದರು.

ಡಾ.ಸಿ.ಎ.ಅರವಿಂದ ಮಾತನಾಡಿದರು. ವಕೀಲರಾದ ಕೆ.ಎಸ್.ಮನು ಹಿರಿಯ ನಾಗರೀಕರ ಸಂರಕ್ಷಣಾ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ವಕೀಲ ಸಂಘದ ಅಧ್ಯಕ್ಷ ಗಂಗರಾಜು, ಕಾರ್ಯದರ್ಶಿ ಕೆ.ಎಸ್.ಮೋಹನ್‌ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ.ಶಿವಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ಪಿ.ವಿಜಯಕುಮಾರ್, ವಕೀಲರಾದ ಪುಪ್ಪಲತಾ, ಕೆ.ಜಿ.ರಘು, ಅರುಣ್, ಪ್ರಾಂಶುಪಾಲ ಸೋಮಶೇಖರ್ ಸೇರಿದಂತೆ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದರು.

PREV

Recommended Stories

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ಆರೆಸ್ಸೆಸ್‌ ಬೆಳವಣಿಗೆ ಕೆಲ ಶಕ್ತಿ, ಸಂಘಟನೆಗಳಿಗೆ ಸಹಿಸಲಾಗ್ತಿಲ್ಲ: ಅರುಣಕುಮಾರ