ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ತೆರಳುವ ನಾಗರಿಕರು ಹಾಗೂ ವಯೋವೃದ್ಧರಿಗೆ ಬೀದಿ ನಾಯಿಗಳಿಂದ ಹೆಚ್ಚು ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವ ನಿಟ್ಟಿನಲ್ಲಿ ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅದಕ್ಕಾಗಿ ನಗರ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳನ್ನು ಹಿಡಿದು ಸೂಕ್ತ ಆಶ್ರಯ ಕೇಂದ್ರಗಳಿಗೆ ಅಥವಾ ಬೇರೆ ನಿರ್ದಿಷ್ಟ ಸ್ಥಳಗಳಿಗೆ ಸ್ಥಳಾಂತರಿಸುವುದರ ಜೊತೆಗೆ, ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಹಾಸನ ರಸ್ತೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವಂತೆ ಬಿಜೆಪಿ ಮುಖಂಡ ಶಿವನ್ ವಾರ್ಡ್‌ನ ಪ್ರಮುಖರೊಂದಿಗೆ ನಗರಸಭೆ ಪೌರಾಯುಕ್ತರಾದ ಕೃಷ್ಣಮೂರ್ತಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಿವನ್, ಹಾಸನ ರಸ್ತೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬೀದಿನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಸಣ್ಣ ಮಕ್ಕಳು ಹಾಗೂ ವಯೋವೃದ್ಧರು ರಸ್ತೆಯಲ್ಲಿ ಓಡಾಡುವಾಗ ನಾಯಿಗಳಿಂದ ಕಚ್ಚಲ್ಪಡುವ ಘಟನೆಗಳು ಸಂಭವಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದರು. ಇದರಿಂದ ಸಾರ್ವಜನಿಕರು ಭಯಭೀತರಾಗಿ ರಸ್ತೆಗಳಲ್ಲಿ ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ವಿಶೇಷವಾಗಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ತೆರಳುವ ನಾಗರಿಕರು ಹಾಗೂ ವಯೋವೃದ್ಧರಿಗೆ ಬೀದಿ ನಾಯಿಗಳಿಂದ ಹೆಚ್ಚು ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವ ನಿಟ್ಟಿನಲ್ಲಿ ನಗರಸಭೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅದಕ್ಕಾಗಿ ನಗರ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳನ್ನು ಹಿಡಿದು ಸೂಕ್ತ ಆಶ್ರಯ ಕೇಂದ್ರಗಳಿಗೆ ಅಥವಾ ಬೇರೆ ನಿರ್ದಿಷ್ಟ ಸ್ಥಳಗಳಿಗೆ ಸ್ಥಳಾಂತರಿಸುವುದರ ಜೊತೆಗೆ, ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ಕುರಿತು ಪೌರಾಯುಕ್ತರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವನ್, ಹಾಸನ ರಸ್ತೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಸಣ್ಣ ಮಕ್ಕಳು ಹಾಗೂ ವಯೋವೃದ್ಧರು ರಸ್ತೆಯಲ್ಲಿ ಓಡಾಡುವಾಗ ನಾಯಿಗಳಿಂದ ಕಚ್ಚಲ್ಪಡುವ ಘಟನೆಗಳು ಸಂಭವಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದರು. ಇದರಿಂದ ಸಾರ್ವಜನಿಕರು ಭಯಭೀತರಾಗಿ ರಸ್ತೆಗಳಲ್ಲಿ ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ನಗರ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಸೂಕ್ತ ಆಶ್ರಯ ಕೇಂದ್ರಗಳಿಗೆ ಅಥವಾ ಬೇರೆ ನಿರ್ದಿಷ್ಟ ಸ್ಥಳಗಳಿಗೆ ಸ್ಥಳಾಂತರಿಸುವುದರ ಜೊತೆಗೆ, ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ಕುರಿತು ಪೌರಾಯುಕ್ತರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.