ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ತಾಲೂಕು ಕಂದಾಯ ಇಲಾಖೆ, ವಿವಿಧ ಇಲಾಖೆಯೊಂದಿಗೆ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನಾದ ಮೊದಲ ಸಭೆಯಲ್ಲಿ ಜನರು ಹೋಬಳಿಯಿಂದ ಬರಪೂರ್ಣ ಸಮಸ್ಯೆಗಳನ್ನು ತಂದು ಶಾಸಕರ ಗಮನಕ್ಕೆ ತಂದಾಗ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಹೊತ್ತು ತನ್ನ ಬಳಿ ಬರದಂತೆ ಗಮನ ಹರಿಸಬೇಕು. ತ್ವರಿತವಾಗಿ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಭೆಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಕಾನೂನು ಪ್ರಕಾರ ಶೀಘ್ರ ವಿಲೇವಾರಿಗೆ ಕ್ರಮ ವಹಿಸಬೇಕು ಎಂದು ಎಚ್ಚರಿಸಿದರು.ತಹಸೀಲ್ದಾರ್ ಶ್ರೇಯಸ್ ಮಾತನಾಡಿ, ಪ್ರಜಾಸೇವೆ ಸಭೆಯಿಂದ ಜನರ ಸಮಸ್ಯೆಗೆ ತ್ವರಿತ ಪರಿಹಾರ ಸಿಗಲಿದೆ. ಹಂತ ಹಂತವಾಗಿ ಆದ್ಯತೆ ಮೇರೆ ಎಲ್ಲರ ಸಮಸ್ಯೆ ಪರಿಹರಿಸಲಾಗುವುದು. ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಎಂದರು.
ಸಭೆಯಲ್ಲಿ ಸಮಸ್ಯೆಗಳ ಸುರಿಮಳೆಗೈದರು. ಹೋಬಳಿಯ ಬಹುತೇಕ ಕೆರೆಕಟ್ಟೆಗಳು ನೀರಿಲ್ಲದೆ ಬಣಗುಟ್ಟುತ್ತಿವೆ. ಬಿದರಹಳ್ಳಿ, ಗಂಗೇನಹಳ್ಳಿಯಂತಹ ಹಲವು ಕೆರೆ, ಕಟ್ಟೆ ತುಂಬಿಸಬೇಕು. ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ತಿನ್ನಲು ಮೇವಿಲ್ಲದಂತಾಗಿದೆ ಎಂದು ರೈತ ಬಸವರಾಜು ಅಳಲು ತೋಡಿಕೊಂಡರು.
ಸಾರ್ವಜನಿಕ ಸ್ಮಶಾನವಿಲ್ಲ. ಅಂತ್ಯಕ್ರಿಯೆ ಮಾಡಲು ಪರದಾಡಬೇಕಿದೆ. ಬಸ್‌ನಿಲ್ದಾಣದ ಬಳಿ ಗುಡಿಸಲು ನಿವಾಸಿಗಳಿಗೆ ನೆಮ್ಮದಿಯಾಗಿ ಬದುಕಲು ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು. ತ್ಯಾಜ್ಯ ವಿಲೇವಾರಿ ಮಾಡಲು ಗ್ರಾಮದಿಂದ ಹೊರವಲಯದಲ್ಲಿ ಸ್ಥಳ ನಿಗದಿಪಡಿಸಬೇಕು. ಗಬ್ಬು ವಾಸನೆ ಸಹಿಸದಾಗಿದೆ. ಖಾಸಗಿ ಕ್ಲಿನಿಕ್‌ನವರು ಅಪಾಯಕಾರಿ ಸಿರೆಂಜ್‌ಗಳನ್ನು ರಸ್ತೆ ಬದಿಯಲ್ಲಿ ಸುರಿಯುತ್ತಿದ್ದಾರೆ. ನಿಜ್ಞಾನಿಕವಾಗಿ ವಿಲೇವಾರಿ ಮಾಡಿಸಿ ಎಂದು ನಿವೇದಿಸಿಕೊಂಡರು.
ಈ ವೇಳೆ ತಾಪಂ ಇಒ ಸುಷ್ಮಾ, ಉಪತಹಸೀಲ್ದಾರ್ ವೀಣಾ, ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.