ಕಾಂಗ್ರೆಸ್ ಆಡಳಿತದಿಂದ ರೋಸಿಹೋದ ಜನ: ಸಬ್ಬಕೆರೆ ಶಿವಲಿಂಗಯ್ಯ

KannadaprabhaNewsNetwork | Published : Apr 1, 2025 12:47 AM

ಸಾರಾಂಶ

ಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರೋಸಿ ಹೋಗಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರೋಸಿ ಹೋಗಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷ ಜೆಡಿಎಸ್ ರಾಜ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದು, ಮತ್ತೆ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮತ್ತೆ ಅಭಿವೃದ್ಧಿ ಕರ್ನಾಟಕವನ್ನು ಕಟ್ಟಲು ಜನತೆಯ ಆಶೀರ್ವಾದ ಅಗತ್ಯ. ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಜಾರಿ ಮಾಡಿದ್ದ ರೈತರ ಸಾಲಮನ್ನಾ, ಲಾಟರಿ ನಿಷೇಧದಂತಹ ಜನಪರ ಯೋಜನೆಗಳು ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿವೆ. ರೈತರು, ಮಹಿಳೆಯರು, ಯುವಕರು, ಹಿರಿಯ ನಾಗರಿಕರಿಗೆ ಯೋಜನೆಗಳನ್ನು ಜಾರಿ ಮಾಡಿದರು. ಕೃಷಿ, ಸಹಕಾರ, ಕೈಗಾರಿಕೆ ಸೇರಿದಂತೆ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ಕೊಟ್ಟು ರಾಜ್ಯದಲ್ಲಿ ಜನಪರ ಆಡಳಿತ ಕೊಡಬಹುದೆಂಬುದನ್ನು ತೋರಿಸಿ ಮಾದರಿಯಾಗಿದ್ದಾರೆ ಎಂದರು.

ಜೆಡಿಎಸ್ ರಾಜ್ಯ ವಕ್ತಾರ ಬಿ.ಉಮೇಶ್ ಮಾತನಾಡಿ, ಇತ್ತೀಚೆಗೆ ಹಿರಿಯ ಮುತ್ಸದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಸಭೆಯಲ್ಲಿ ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿರುವುದನ್ನು ನೋಡಿದರೆ ಅವರಲ್ಲಿನ ಜನಪರ ಕಾಳಜಿ ತೋರಿಸುತ್ತದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡುವ ಮೂಲಕ ಅಭಿವೃದ್ಧಿಯ ಹರಿಕಾರರಾಗಿ ಹೆಸರು ಗಳಿಸಿದ್ದಾರೆ ಎಂದರು.

ದಿಶಾ ಸಮಿತಿ ಸದಸ್ಯ ವಿ.ನರಸಿಂಹಮೂರ್ತಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕುಮಾರಣ್ಣನ ಮಾರ್ಗದರ್ಶನದಲ್ಲಿ ರಾಮನಗರ ಕ್ಷೇತ್ರದ ಜನರ ಮೇಲೆ ವಿಶ್ವಾಸವಿಟ್ಟಿರುವ ನಿಖಿಲ್ ಕುಮಾರಸ್ವಾಮಿ ಆವರು ರಾಜ್ಯಾದ್ಯಂತ ಎಲ್ಲ ಕ್ಷೇತ್ರಗಳ ಪ್ರವಾಸ ನಡೆಸಿ ಜನರ ಕಷ್ಟಸುಖಗಳನ್ನು ಆಲಿಸಿ ಬಗೆಹರಿಸುವ ಮೂಲಕ ಜೆಡಿಎಸ್ ಪಕ್ಷ ಸಂಘಟನೆ ಮಾಡಲು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಬಿ.ಉಮೇಶ್, ಡಾ.ಭರತ್‌ಕೆಂಪಣ್ಣ, ವಿ.ನರಸಿಂಹಮೂರ್ತಿ, ಕೆ.ಚಂದ್ರಯ್ಯ, ಕುಮಾರ್, ಗೌಡಯ್ಯನದೊಡ್ಡಿಜಿ.ಟಿ.ಕೃ಼ಷ್ಣ, ಬಾಲಗೇರಿ ರವಿ, ಗುನ್ನೂರು ದೇವರಾಜು, ಮಂಜುನಾಥ್, ಜಯಕುಮಾರ್, ಸುಗ್ಗನಹಳ್ಳಿರಾಮಕೃ?ಯ್ಯ, ಶಿವಕುಮಾರಸ್ವಾಮಿ, ರಮೇಶ್, ವೆಂಕಟೇಶ್, ಯಕ್ಷರಾಜು, ಕಗ್ಗಲಯ್ಯ, ಸರಸ್ವತಿ, ಬೋರೇಗೌಡ, ಕೆಂಪರಾಜು ಇತರರಿದ್ದರು.

ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಹಂಬಲವಿಟ್ಟುಕೊಂಡು ಕಲ್ಲುಗೋಪಹಳ್ಳಿ ರೇಣುಕಮ್ಮ ಮುಂದೆ ಎದುರಾಗಿರುವ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಎಲ್ಲರೂ ಸಹಕಾರ ನೀಡಿ. ಸಹಕಾರ ಕ್ಷೇತ್ರದಲ್ಲಿ ಬದಲಾವಣೆ ತರೋಣ.-ಡಾ.ಭರತ್‌ ಕೆಂಪಣ್ಣ, ಜೆಡಿಎಸ್ ಮುಖಂಡ

Share this article