ಡಂಬಳ: ಮುಖ್ಯಮಂತ್ರಿ ಸಿದ್ದರಾಯಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಹಾಲು, ದಿನಬಳಕೆ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ ಎಂದು ಬಿಜೆಪಿ ಡಂಬಳ ಮಂಡಳ ಅಧ್ಯಕ್ಷ ಅಂದಪ್ಪಹಾರೂಗೇರಿ ಹೇಳಿದರು.
ಬಡವರು, ದಲಿತರು, ಮಧ್ಯಮವರ್ಗ, ಹಿಂದುಳಿದ ವರ್ಗ ಸೇರಿದಂತೆ ಜನಸಾಮಾನ್ಯರು ಬೆಲೆ ಪರಿಣಾಮ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಏಪ್ರಿಲ್ 22ರಂದು ಬಿಜೆಪಿ ವತಿಯಿಂದ ಗದಗ ನಗರದಲ್ಲಿ ಜನಾಕ್ರೋಶ ಯಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕ್ಷೇತ್ರದ ಹಾಗೂ ಡಂಬಳ ಮಂಡಳದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಕೃಷ್ಣಾ ಬಂಡಿ, ಉಪಾಧ್ಯಕ್ಷ ನಿಂಗಪ್ಪ ಮಾದರ, ವೆಂಕನಗೌಡ ಪಾಟೀಲ, ಬಸವರಾಜ ಚನ್ನಳ್ಳಿ, ಕುಬೇರಪ್ಪ ಬಂಡಿ, ರಾಜೇಶ ಅರಕಲ್ಲ್, ನಾಗರಾಜ ಕಾಟ್ರಳ್ಳಿ, ಮುದ್ದಿಂಗಪ್ಪ ಕೊರ್ಲಹಳ್ಳಿ, ಈಶ್ವರಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಪ್ರಭು ಕರಮುಡಿ, ಪಂಚಾಕ್ಷರಿ ಹರ್ಲಾಪುರಮಠ, ಪ್ರಕಾಶ ಕೊತಂಬ್ರಿ, ಶಕ್ತಿ ಕೇಂದ್ರದ ಪ್ರಮುಖರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಕಾರ್ಯಕರ್ತರು ಇದ್ದರು.