ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ರಾಜೇಂದ್ರ ಗಂಜ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಪಕ್ಷದ ಜಿಲ್ಲಾಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾಲ್ಕು ದಶಕಕ್ಕು ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶದ ಅಭಿವೃದ್ಧಿ ಮಾಡದೇ ಕುಟುಂಬ ರಾಜಕರಣ ಮಾಡಿದೆ. ನರೇಂದ್ರ ಮೋದಿಯವರು 9 ವರ್ಷದ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಲು ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಬೇಕು ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಆಸೆ ತೋರಿಸಿ ಅಧಿಕಾರ ಪಡೆದಿದ್ದಾರೆ. ಆದರೆ ಅದನ್ನು ಸಮರ್ಪಕ ಜಾರಿ ಮಾಡಿಲ್ಲ. ಕಾಂಗ್ರೆಸ್‌ನ ಮೋಸದ ಗ್ಯಾರಂಟಿಗಳನ್ನು ಜನ ಅರಿತಿದ್ದು, ಇಂತಹ ಸಮಯದಲ್ಲಿ ಪಕ್ಷದ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದ್ದು, ಕಾಂಗ್ರೆಸ್‌ನ ಮೋಸ, ಮೋದಿಯ ಸಾಧನೆಗಳನ್ನು ಮನೆ ಮನೆಗೆ ತಿಳಿಸಿ ಜನರನ್ನು ಜಾಗೃತಿಗೊಳಿಸುವ ಕೆಲಸವನ್ನು ಮಾಡಬೇಕು ಎಂದರು.ಮೋಸದ ಗ್ಯಾರಂಟಿಗಳಿಂದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದು, ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ದಂಗಾಗಿದ್ದಾರೆ. ಕೇಂದ್ರದಲ್ಲಿ ಮೋದಿ ಗ್ಯಾರಂಟಿಗೆ ಜನ ಮರಳಾಗಿದ್ದು ಮತ್ತೊಮ್ಮೆ ಅವರು ಪ್ರಧಾನಿಯಾಗಲಿದ್ದಾರೆ. ಕಾರ್ಯಕರ್ತರು ಉತ್ಸಾಹದಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯ ಅಹಿಂದ ನಾಯಕರಾಗಿ ಉಳಿದಿಲ್ಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 8 ತಿಂಗಳಾದರೂ ಒಂದು ಹೊಸ ಯೋಜನೆ ಜಾರಿಯಾಗಿಲ್ಲ. ವಿಧಾನಸಭಾ ಕ್ಷೇತ್ರಗಳಿಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ. ಬರ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ಹಿಂದು ಕಾರ್ಯಕರ್ತರ ಮೇಲೆ ದರ್ಪ ತೋರಿಸುತ್ತಿದೆ. ಶಾಂತಿ ಸುವ್ಯವಸ್ಥೆ ಕಾಪಾಡದೇ ಅರಾಜಕತೆ ಸೃಷ್ಠಿಯಾಗಿದೆ ಎಂದು ಆರೋಪಿಸಿದರು.
ಮಾಜಿ ಶಾಸಕರಾದ ರಾಜುಗೌಡ, ಮುಖಂಡರಾದ ಪಿ.ರಾಜು, ಎ.ಪಾಪಾರೆಡ್ಡಿ, ರವೀಂದ್ರ ಜಲ್ದಾರ್, ಪಿ.ಗೋವಿಂದ, ಎ.ಚಂದ್ರಶೇಖರ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಪ್ರಮುಖರು, ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಇದ್ದರು. ಶಾಸಕ ಡಾ.ಶಿವರಾಜ ಪಾಟೀಲ ಸ್ವಾಗತಿಸಿದರು. ಶಂಕರರೆಡ್ಡಿ ನಿರೂಪಿಸಿದರು.