ಕನ್ನಡಪ್ರಭ ವಾರ್ತೆ ವಿಜಯಪುರ
ಈ ಕುರಿತು ಪ್ರಕಟಣೆ ನೀಡಿದ ಅವರು, ಯಾರು ಏನೇ ಹೇಳಿದರು ಕಾಂಗ್ರೆಸ್ ಪಕ್ಷದ ಮೇಲೆ ರಾಜ್ಯದ ಜನರು ನಂಬಿಕೆಯಿಟ್ಟಿದ್ದಾರೆ ಎಂಬುದಕ್ಕೆ ಈ ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರುವುದೇ ಸಾಕ್ಷಿಯಾಗಿವೆ. ಬಾಗಲಕೋಟೆ ಹಾಗೂ ದಾವಣಗೆರೆ ಈ ಎರಡೂ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ನ ಕೈ ಬಿಟ್ಟಿಲ್ಲ. ಚುನಾವಣೆ ವೇಳೆ ಯಾರೇ ಏನೇ ಕಿತಾಪತಿ ಮಾಡಿದರೂ ಸಹ ಅಲ್ಪಸಂಖ್ಯಾತರು ಕಾಂಗ್ರೆಸ್ ಕಡೆಗೆ ಇದ್ದಾರೆ ಎಂಬುದು ಸಾಬೀತಾಗಿದೆ. ರಾಜ್ಯದ ಜನರು ಆಶೀರ್ವದಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಕೈ ಬಲಪಡಿಸಿದ್ದಾರೆ ಎಂದು ಎಸ್.ಎಂ.ಪಾಟೀಲ ಗಣಿಹಾರ ತಿಳಿಸಿದ್ದಾರೆ.