ಕಾರವಾರ: ಬಿಜೆಪಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿರುವುದರಿಂದ ಜನತೆ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಸದಸ್ಯತ್ವವನ್ನು ಹೆಚ್ಚಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ವಿನಂತಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅವಿಶ್ರಾಂತ ದುಡಿಮೆ, ದೇಶಕ್ಕಾಗಿ ಸಲ್ಲಿಸುತ್ತಿರುವ ಸೇವೆಯಿಂದ ಇಡಿ ಜಗತ್ತು ಭಾರತದತ್ತ ನೋಡುತ್ತಿದೆ. ಪಕ್ಷವನ್ನು ಅಭೂತಪೂರ್ವವಾಗಿ ಸಂಘಟಿಸಿ ಮೋದಿ ಅವರಿಗೆ ಮತ್ತಷ್ಟು ಶಕ್ತಿ ತುಂಬೋಣ ಎಂದು ತಿಳಿಸಿದರು.
ಕಾರ್ಯಕರ್ತರೇ ಪಕ್ಷಕ್ಕೆ ದೊಡ್ಡ ಆಸ್ತಿ. ಕಾರ್ಯಕರ್ತರು ಉತ್ಸಾಹದಿಂದ ಈ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ. ಸದಸ್ಯತ್ವ ಅಭಿಯಾನದಲ್ಲಿ ಕಾರ್ಯಕರ್ತರ ಜವಾಬ್ದಾರಿ ತುಂಬ ದೊಡ್ಡದು. ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಲು ನಿರಂತರವಾಗಿ ತೊಡಗಿಕೊಳ್ಳುವಂತೆ ವಿನಂತಿಸಿದರು.ಕುಮಟಾ ಶಾಸಕ ದಿನಕರ ಶೆಟ್ಟಿ, ಭಟ್ಕಳ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ, ಜಿಲ್ಲಾ ಮುಖಂಡರಾದ ಗೋವಿಂದ ನಾಯ್ಕ, ಸಂಜಯ ನಾಯ್ಕ, ಜಿ.ಐ. ಹೆಗಡೆ ಮತ್ತಿತರರು ಇದ್ದರು.