ಕನ್ನಡಪ್ರಭ ವಾರ್ತೆ ಉಳ್ಳಾಲ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಭಿನಂದನೆ, 82 ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಗುರುವಾರ ನಡೆಯಿತು.ರೈತ ನಾಯಕ, ಹುಟ್ಟು ಹೋರಾಟಗಾರರಾದ ಯಡಿಯೂರಪ್ಪ ಬಹಳಷ್ಟು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರತಿ ವರ್ಷ ಅವರ ಹೆಸರಲ್ಲಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಸಮಾಜಮುಖಿ ಕಾರ್ಯಗಳನ್ನ ನಡೆಸುತ್ತಾ ಬಂದಿದ್ದೇವೆಂದು ರವೀಂದ್ರ ಶೆಟ್ಟಿ ಹೇಳಿದರು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾತನಾಡಿದರು.ಭಾಗ್ಯಲಕ್ಷ್ಮಿ ಯೋಜನೆಯ 10 ಫಲಾನುಭವಿ ಹೆಣ್ಮಕ್ಕಳನ್ನು ಅಭಿನಂದಿಸಲಾಯಿತು.
.................
ನಾನು ರಾಜಕೀಯದಲ್ಲಿ ಈ ಹಂತಕ್ಕೆ ಬರಲು ಬಿ.ಎಸ್.ಯಡಿಯೂರಪ್ಪ ಕಾರಣರಾಗಿದ್ದು,ಅವರನ್ನ ಪ್ರತೀ ದಿನವೂ ಸ್ಮರಿಸುತ್ತಿದ್ದೇನೆ. ಅವರ ಹುಟ್ಟು ಹಬ್ಬದ ಪ್ರಯುಕ್ತ 82 ವಿವಿಧ ಜಾತಿಯ ಸಸಿಗಳನ್ನ ನೆಟ್ಟು, ಆಶ್ರಮವಾಸಿಗಳಿಗೆ ವಸ್ತ್ರಗಳನ್ನೂ ವಿತರಿಸಿದ್ದೇವೆ.-ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ.