ಜನತೆ ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸದ್ದಾರೆ: ಪಾಟೀಲ್‌

KannadaprabhaNewsNetwork | Published : Apr 5, 2024 1:01 AM

ಸಾರಾಂಶ

ತಳಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಮೋದಿ ಸರ್ಕಾರವು ಭಾರತವನ್ನು ಅಭಿವೃದ್ಧಿಗೊಳಿಸಿದೆ ಎಂದು ಯಾದಗಿರಿ ಜಿಲ್ಲಾ ಬಿಜೆಪಿ ವಕ್ತಾರ ಎಚ್. ಸಿ. ಪಾಟೀಲ್ ಹೇಳಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ತಳಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಮೋದಿ ಸರ್ಕಾರವು ಭಾರತವನ್ನು ಅಭಿವೃದ್ಧಿಗೊಳಿಸಿದೆ ಎಂದು ಯಾದಗಿರಿ ಜಿಲ್ಲಾ ಬಿಜೆಪಿ ವಕ್ತಾರ ಎಚ್. ಸಿ. ಪಾಟೀಲ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಂಪನ್ಮೂಲ, ಅಭಿವೃದ್ಧಿಯು ಕಟ್ಟಕಡೆಯ ವ್ಯಕ್ತಿಗೂ ತಲಪಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯ ಇಡೀ ದೇಶದಲ್ಲಿ ಗಮನಾರ್ಹ ಸುಧಾರಣೆಗಳಿಗೆ ಕಾರಣವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರು ನಡೆಸಿದ ಭಾರತ ಜೋಡೋ ಯಾತ್ರೆಗೆ ದೇಶದ ತುಂಬೆಲ್ಲ ಜನಮನ್ನಣೆ ಸಿಗದೆ ಸಂಫೂರ್ಣ ವಿಫಲವಾಗಿದೆ. ನಕ್ಸಲೈಟ್‌ಗಳು, ವಿಭಜನವಾದಿಗಳು, ಗಡಿ ಸಮಸ್ಯೆಗಳಿಗೆ ಮತ್ತು ದೇಶ ವಿಭಜಿಸುವ ಶಕ್ತಿಗಳನ್ನು ಬೆಂಬಲಿಸಿದ ಪರಿಣಾಮವೇ ಈ ಯಾತ್ರೆಗೆ ಜನ ಸಮರ್ಥನೆ ನೀಡಿಲ್ಲ, ಕಾಂಗ್ರೆಸ್‌ನವರು ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷವು ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ದೇಶದ ಏಕತೆ ಅಖಂಡತೆ ಕುರಿತು ಕಾಂಗ್ರೆಸ್ ಎಂದೂ ಕೂಡ ಚಿಂತಿಸಿಲ್ಲ. ನೇಹರು ಆಡಳಿತದಲ್ಲಿದ್ದಾಗ ಕಾಶ್ಮೀರದಲ್ಲಿ ಪ್ರತ್ಯೇಕ ಧ್ವಜ ವಿಶೇಷ ಸ್ಥಾನಮಾನ ಒಪ್ಪಂದ ಆಗಿತ್ತು. ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಅವರು 370ನೇ ವಿಧಿಯನ್ನು ರದ್ದುಪಡಿಸಿ ದೇಶದ ಏಕತೆ, ಅಖಂಡತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನವರು ದೇಶ-ಧರ್ಮ ಒಡೆಯುವ ಕೆಲಸ ಮಾಡುತ್ತಿದೆ ಎಂದರು.

ಈ ಬಾರಿ ದೇಶದಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿ ಆಗಲಿದ್ದಾರೆ. ಮಹಿಳೆಯರಿಗೆ ವಿಶೇಷ ಸ್ಥಾನಮಾನ ಮೋದಿ ಅವರು ಕೊಟ್ಟಿದ್ದಾರೆ. ಸುಕನ್ಯ ಸಮೃದ್ಧಿ, ಬೇಟಿ ಬಚಾವೋ ಬೇಟಿ ಪಡಾವು ಹೀಗೇ ಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಕಾಂಗ್ರೆಸ್ ಮಹಿಳಾ ವಿರೋಧಿಯಾಗಿದೆ. ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಹಲವಾರು ಯೋಜನೆಗಳಿಂದ ಇಂದು ದೇಶದ ಕೋಟ್ಯಂತರ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಯೋಜನೆಗಳನ್ನು ಜಾರಿ ಮಾಡಿ ವಿಶ್ವ ಖ್ಯಾತಿ ಹೊಂದಿರುವ ನರೇಂದ್ರ ಮೋದಿ ಮತ್ತೆ ಪ್ರಧಾನಿ ಮಾಡಬೇಕಿದೆ ಎಂದರು.

ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಸಂಗಣ್ಣ ಸಾಹು ವೈಲಿ, ಬಸನಗೌಡ ಯಡಿಯಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಲಪ್ಪ ಗುಳಗಿ, ವಿರುಪಾಕ್ಷಯ್ಯ ಸ್ಥಾವರಮಠ, ಬಿ.ಎಂ.ಅಳ್ಳಿಕೋಟಿ, ಸೋಮಶೇಖರ ಸ್ಥಾವರಮಠ, ಬಸಣ್ಣ ದೇಸಾಯಿ, ಬಸಣ್ಣ ಬಾಲುಗೌಡ್ರು, ರವಿ ಪುರಾಣಿಕಮಠ ಸೇರಿದಂತೆ ಇತರರಿದ್ದರು.

Share this article