ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆ ಮಾಡಲು ಜನರು ಕೈಜೋಡಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

KannadaprabhaNewsNetwork |  
Published : Jun 13, 2025, 02:31 AM IST
12ಬಾಲ | Kannada Prabha

ಸಾರಾಂಶ

ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಬಾಲಕಾರ್ಮಿಕ ಪದ್ಧತಿಯು ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ಅದನ್ನು ತಳಮಟ್ಟದಲ್ಲಿ ನಿರ್ಮೂಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆ ಮಾಡಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಅನಿಷ್ಠ ಪದ್ಧತಿಗಳು ಮಕ್ಕಳು ಬಾಲ್ಯವನ್ನು ಸವಿಯುವುದನ್ನು ತಪ್ಪಿಸಿ ಶಿಕ್ಷಣ ವಂಚಿತರಾಗುತ್ತಾರೆ. ಬಾಲಕಾರ್ಮಿಕರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತವಾಗುತ್ತವೆ, ಜೊತೆಗೆ ಈ ಮಕ್ಕಳು ಅನೇಕ ಪರಿಣಾಮವನ್ನು ಎದುರಿಸಿ, ಮುಂದೆ ಸಮಾಜಘಾತುಕ ವ್ಯಕ್ತಿಯಾಗಿ ಬದಲಾಗುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕಲ್ಪಿಸಬಾರದು ಎಂದರು.

ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರಿದಿದ್ದರೂ ಸಹ ಈವರೆಗೆ ಸುಮಾರು 62 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಹದಿನೆಂಟು ವರ್ಷದೊಳಗಿನ ಹೆಣ್ಣು ಮಕ್ಕಳು ಮದುವೆಗೆ ಭೌತಿಕವಾಗಿ ಪ್ರಭುದ್ದರಾಗಿರುವುದಿಲ್ಲ. ಆದ್ದರಿಂದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕರ ಬಗ್ಗೆ ಮಾಹಿತಿ ದೊರೆತಲ್ಲಿ ಸ್ಥಳೀಯ ಪೊಲೀಸರಿಗೆ ಅಥವಾ ಕಾರ್ಮಿಕ ನಿರೀಕ್ಷರುಗಳಿಗೆ ಮಾಹಿತಿ ನೀಡಿ ಈ ಪಿಡುಗು ನಿರ್ಮೂಲನೆಗೆ ಸಹಕರಿಸಬೇಕು ಎಂದು ಹೇಳಿದರು.ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ ಮಾತನಾಡಿ, ಬಾಲ ಕಾರ್ಮಿಕರು ಕಂಡು ಬಂದಲ್ಲಿ ನಾವು ಏಕೆ ರಕ್ಷಿಸಬೇಕು. ಬೇರೆಯವರು ರಕ್ಷಿಸುತ್ತಾರೆ ಎಂಬುದನ್ನು ಬಿಟ್ಟು ಅಮಾಯಕ ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಅರಿತು ಅವರ ರಕ್ಷಣೆಗೆ ಮುಂದಾಗಬೇಕು, ಹೊರ ಜಿಲ್ಲೆಯಿಂದ ಬಂದಿರುವ ಮಕ್ಕಳು ಎಂದು ನಿರ್ಲಕ್ಷಿಸಬಾರದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈಕುಂಠ ಬಾಳಿಕಾ ಕಾನೂನು ವಿದ್ಯಾಲಯದ ಪ್ರಾಧ್ಯಾಪಕ ಹಾಗೂ ವಕೀಲ ರಾಯಲ್ ಫರ್ನಾಂಡೀಸ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ಉಪಸ್ಥಿತರಿದ್ದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮೃತ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ