ಹುಬ್ಬಳ್ಳಿ:
ಇಲ್ಲಿನ ಉಣಕಲ್ಲ ಕೆರೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಆಶ್ರಯದಲ್ಲಿ ಜಿಲ್ಲೆಯಲ್ಲಿ ಪ್ರವಾಹದ ಮುನ್ನೆಚ್ಚರಿಕೆ ಕುರಿತು ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಣ್ಣಿಹಳ್ಳ, ತುಪ್ಪರಿಹಳ್ಳಗಳು ಭಾರಿ ಪ್ರಮಾಣದಲ್ಲಿ ಉಕ್ಕಿ ಹರಿದು ಅಪಾರ ನಷ್ಟವನ್ನುಂಟು ಮಾಡುತ್ತವೆ. ಕುಂದಗೋಳ ತಾಲೂಕಿನ 17, ಹುಬ್ಬಳ್ಳಿ 7, ಅಣ್ಣಿಗೇರಿ 1, ನವಲಗುಂದ 26, ಧಾರವಾಡ 5 ಸೇರಿದಂತೆ ಒಟ್ಟು 56 ಗ್ರಾಮಗಳ 8000ಕ್ಕೂ ಅಧಿಕ ಜನರು ಹಾಗೂ 3000ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹಕ್ಕೆ ಒಳಗಾಗಬಹುದು. ಈಗಾಗಲೇ 71 ಕಾಳಜಿ ಕೇಂದ್ರ ಮತ್ತು 6 ಗೋ ಶಾಲೆ ತೆರೆಯಲು ಸ್ಥಳ ಗುರುತಿಸಲಾಗಿದೆ ಎಂದರು.ಈಗಾಗಲೇ ಜಿಲ್ಲೆಯಲ್ಲಿ 15 ದಿನಗಳಲ್ಲಿ 3 ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಮಕ್ಕಳು ನೀರಿಗಿಳಿಯಲು ಹೋಗುವ ಮುನ್ನ ಪಾಲಕರು, ಪೋಷಕರ ಅನುಮತಿ ಪಡೆದುಕೊಳ್ಳಬೇಕು. ಅಲ್ಲದೇ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ತಿಳಿಸಿದರು.
ಇದೇ ವೇಳೆ ಧಾರವಾಡ, ಹುಬ್ಬಳ್ಳಿ, ಅಮರಗೋಳ, ಕುಂದಗೋಳ, ಬೇಲೂರು ಕೈಗಾರಿಕಾ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸುವ ಅಣಕು ಪ್ರದರ್ಶನ ಪ್ರದರ್ಶಿಸಿದರು. ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿ ರಕ್ಷಿಸಿದ ವೇಳೆ ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಡಾ. ನೀಲಾ ಕಾಸಿನಕುಂಟೆ ಮತ್ತು ಡಾ. ಅನೀಶ್ ಮಾಹಿತಿ ನೀಡಿದರು.