ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸೇರಿದಂತೆ ಇತರೆ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಎಂ.ಡಿ.ರೂಪ ಚಾಲನೆ ನೀಡಿ ಮಾತನಾಡಿ, 1970 ರಿಂದ ಏ.22ರಂದು ವಿಶ್ವ ಭೂಮಿ ದಿನವನ್ನು ಆಚರಿಸಲಾಗುತ್ತಿದೆ. ಇಲ್ಲಿಗೆ 55 ವರ್ಷಗಳು ಕಳೆದರೂ ಭೂಮಿ ಬಗ್ಗೆ ಯಾರು ಕಾಳಜಿ ವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜನರು ಭೂಮಿ ಮೇಲಿನ ಪರಿಸರವನ್ನು ನಾಶ ಮಾಡುತ್ತಲೇ ಬಂದಿದ್ದಾರೆ. ವಿಶ್ವದಲ್ಲಿ ಮನುಷ್ಯ, ಪ್ರಾಣಿ, ಪಕ್ಷಿ ಸಂಕುಲ ಬದುಕಲು ಪರಿಸರವೇ ಕಾರಣವಾಗಿದೆ. ಭೂಮಿ ಮಹತ್ವವನ್ನು ಜನರಿಗೆ ಜಾಗೃತಿ ಮೂಲಕ ಅರಿವು ಮೂಡಿಸಬೇಕಿದೆ ಎಂದರು.ನ್ಯಾಯಾಧೀಶರಾದ ಹನುಮಂತರಾಯಪ್ಪ ಹಾಗೂ ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಕುರಿತು ಮಾತನಾಡಿದರು. ಕೃಷಿ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಕೆ. ಕೆಂಚೇಗೌಡ ಕೃಷಿ ಭೂಮಿ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಆಶಯ್ ಜಿ.ಮಧು ಹುಟ್ಟುಹಬ್ಬ ಆಚರಣೆ
ಹನುಮಂತನಗರದ ಶ್ರೀಆತ್ಮಲಿಂಗೇಶ್ವರ ಸಮುದಾಯ ಭವನದಲ್ಲಿ ಭಾರತೀ ವಿದ್ಯಾಸಂಸ್ಥೆ ಸಿಇಒ ಆಶಯ್ ಜಿ.ಮಧು ಹುಟ್ಟುಹಬ್ಬವನ್ನು ಟ್ರಸ್ಟ್‌ನ ಅಂಗ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರು, ಮಾಜಿ ಸಂಸದ ದಿ.ಜಿ.ಮಾದೇಗೌಡ, ಮಧು ಮಾದೇಗೌಡರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿದರು.
ಇದಕ್ಕೂ ಮೊದಲು ಮನೆ ದೇವರು ಶ್ರೀಕಾರ್ಕಹಳ್ಳಿ ಬಸವೇಶ್ವರಸ್ವಾಮಿ, ಚಾಂಷುಗರ್ಸ್ ಕಾರ್ಖಾನೆ ಆವರಣದ ಶ್ರೀ ಚಾಮುಂಡೇಶ್ವರಿ ದೇವಾಲಯದ ಮತ್ತು ಹನುಮಂತನಗರದ ಶ್ರೀಆತ್ಮಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಆಶಯ್ ಜಿ.ಮಧು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಬಳಿಕ ಅಭಿಮಾನಿಗಳು, ಮುಖಂಡರು ಬೃಹತ್ ಹಾರ ಹಾಕಿ ಅಭಿನಂದಿಸಿದರು.ಬಳಿಕ ಆಶಯ್ ಜಿ.ಮಧು ಮಾತನಾಡಿ, ನನ್ನ ತಾತ ದಿ.ಜಿ.ಮಾದೇಗೌಡ ಮತ್ತು ನನ್ನ ತಂದೆ ಮಧು ಅವರ ಅಭಿಮಾನಿಗಳು ನನ್ನ ಹುಟ್ಟುಹಬ್ಬವನ್ನು ಆಚರಿಸಿದ್ದು ಅಭಿಮಾನಿಗಳ ಪ್ರೀತಿಗೆ ಋಣಿಯಾಗಿರುತ್ತೇನೆ. ನಿಮ್ಮಗಳ ಸೇವೆಗೆ ನಾನು ಸದಾ ಸಿದ್ದನಿದ್ದೇನೆ ಎಂದರು.