ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 71 ಕನ್ನಡ ರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಮಾತನಾಡುವ ಮಂಡ್ಯ ಜಿಲ್ಲೆಯ ಜನರು ಕನ್ನಡ ಭಾಷೆಯನ್ನು ಪ್ರೀತಿಸಿ ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಇತ್ತಿಚಿನ ದಿನಗಳಲ್ಲಿ ನಮ್ಮ ಬದುಕನ್ನು ಕಟ್ಟಿಕೊಳ್ಳಲು ಅಗತ್ಯವಿರುವ ಎಲ್ಲಾ ಭಾಷೆಗಳನ್ನು ಕಲಿಯಬೇಕಾದ ಅನಿವಾರ್ಯತೆ ಇದೆ. ಆದರೆ, ನಮ್ಮ ತಾಯಿ ಭಾಷೆ ಕನ್ನಡವನ್ನು ಮಾತನಾಡುವ ಮೂಲಕ ಇಲ್ಲಿನ ಅನ್ಯ ಭಾಷಿಕರಿಗೂ ಕನ್ನಡ ಭಾಷೆ ಕಲಿಸುವಂತಾಗಲು ಎಲ್ಲರೂ ಮುಂದಾಗಬೇಕೆಂದು ಮನವಿ ಮಾಡಿದರು.ನಾನು ಶಾಸಕನಾದ ಮೂರು ವರ್ಷಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಜೊತೆಗೆ ಮದ್ದೂರು ಉತ್ಸವ, ಗಣೇಶೋತ್ಸವಗಳನ್ನು ಒಂದು ವಾರಗಳ ಕಾಲ ಆಚರಣೆ ಮಾಡುವ ಮೂಲಕ ಈ ನೆಲದ ಆಚರಣೆಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ಗಣ್ಯರು ಶಾಲಾ ಮಕ್ಕಳು ಪಥ ಸಂಚಲನದ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ನೃತ್ಯ, ಮಲ್ಲಕಂಬ ಹಾಗೂ ವಿವಿಧ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಆರ್. ಎಫ್. ಗವಿಯಪ್ಪ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್, ಸಿಡಿಪಿಒ ಅರುಣ್ ಕುಮಾರ್, ಕಸಾಪ ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್, ಪ್ರೋ.ಬಿ.ಕೃಷ್ಣ, ಮರಿದೇವರು, ಮುಖಂಡರಾದ ಆದೇಶ್, ಮಹದೇವಯ್ಯ ಸೇರಿದಂತೆ ಮತ್ತಿತರರು ಇದ್ದರು.