ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಗಾಡಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಪಂಕ್ಚರ್ ಆಗಿದೆ ಎಂದು ಲೇವಡಿ ಮಾಡಿದರು.
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಮ್ಮ ಸರ್ಕಾರದ ಆಡಳಿತ ವೈಖರಿಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವೆನಿಸಿದೆ. ಹೀಗಾಗಿಯೇ ಅವರು ಜಾತಿವಾರು ಉಪಮುಖ್ಯಮಂತ್ರಿಗಳನ್ನು ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ ಅಧಿಕಾರಕ್ಕೆ ಬಂದ 7 ತಿಂಗಳಿಗೆ ದೇಶದಲ್ಲಿ ಯಾವುದಾದರೂ ಸರ್ಕಾರ ಜನರ ನಂಬಿಕೆ, ವಿಶ್ವಾಸ ಕಳೆದುಕೊಂಡಿದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಅವರು ಕುಟುಕಿದರು.28 ಸ್ಥಾನಗಳಲ್ಲೂ ಬಿಜೆಪಿ ಗೆಲ್ಲಿಸಿ
ಪ್ರಧಾನಿ ಮೋದಿಯವರು ಸರ್ವವ್ಯಾಪ್ತಿ, ಸರ್ವರ ಸ್ಪರ್ಶ ಎಂಬಂತೆ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. 19 ಹಿಂದುಳಿದ ವರ್ಗಗಳಿಗೆ ನೇರವಾಗಿ ಸರ್ಕಾರದ ಅನುದಾನ ನೀಡುವ ಮೂಲಕ ಆ ವರ್ಗಗಳಿಗೆ ಆರ್ಥಿಕ ಶಕ್ತಿ ನೀಡಿ, ಅವರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರಾಜಕಾರಣಿಯಾದವರು ಮುಂದಿನ ಚುನಾವಣೆ ಬಗ್ಗೆ ಮಾತ್ರ ಯೋಚಿಸುತ್ತಾರೆ. ಆದರೆ, ರಾಜಕೀಯ ತಜ್ಞರು ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ. ಅದೇ ರೀತಿ ಮೋದಿ ಅವರು ಈ ದೇಶದ ಭವಿಷ್ಯ, ಮುಂದಿನ ಪೀಳಿಗೆ ಬಗ್ಗೆ ಚಿಂತನೆ ನಡೆಸಿದ್ದಾರೆ. 2047ರ ವೇಳೆಗೆ ವಿಕಸಿತ ಭಾರತ, ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸಂಕಲ್ಪ ತೊಟ್ಟಿದ್ದಾರೆ ಎಂದರು.
----
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗುರಿ ತಲುಪಲು ಮುಖಂಡರ ಮಾನಸಿಕ ಸ್ಥಿತಿ ಬದಲಾಗಬೇಕು. ಜಾತಿ, ವರ್ಗಗಳಿಗೆ ಸೀಮಿತವಾಗಿ ಯೋಚನೆ ಮಾಡದೆ, ಪಕ್ಷದ ಗೆಲುವಿಗಾಗಿ ಶಾಸಕರಂತೆ, ವೀರ ಸೇನಾನಿಗಳಂತೆ ಕೆಲಸ ಮಾಡಬೇಕು. ಪಕ್ಷದ ಬೇರನ್ನು ಗಟ್ಟಿ ಮಾಡಬೇಕು. ಆಗ ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಕ್ಕೆ ಸಹಾಯವಾಗುತ್ತದೆ.