ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಹಸೀಲ್ದಾರ್ ವೈ. ಎಂ. ರೇಣುಕುಮಾರ್ ಮಾತನಾಡಿ, ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ೬ ಅರ್ಜಿಗಳು, ಪುರಸಭೆಗೆ ಸಂಬಂಧಿಸಿದಂತೆ ೪ ಅರ್ಜಿಗಳು, ಕೃಷಿ ಇಲಾಖೆ ಸಂಬಂಧಿಸಿದಂತೆ ೧ ಮತ್ತು ಹೇಮಾವತಿ ನೀರಾವರಿ ಇಲಾಖೆ ಸಂಬಂಧಿಸಿದಂತೆ ೧ ಅರ್ಜಿ ಸಲ್ಲಿಕೆಯಾಗಿದ್ದು, ಒಟ್ಟು ೧೨ ಅರ್ಜಿಗಳು ಸಲ್ಲಿಕೆಯಾಗಿದೆ. ಇಲಾಖಾವಾರು ಲಭ್ಯವಾದ ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡುವ ಜತೆಗೆ ಅಧಿಕಾರಿಗಳು ಜನರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ನಿಯಮದಂತೆ ಇತ್ಯರ್ಥ ಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.