ಕನ್ನಡಪ್ರಭ ವಾರ್ತೆ, ತುಮಕೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬರಲು ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡಿ, ತದನಂತರ ಅತ್ತ ಕಡೆ ತಿರುಗಿಯೂ ನೋಡುವುದಿಲ್ಲ. 2023ರ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದುವರೆಗೂ ಆ ಬಗ್ಗೆ ಕ್ರಮ ವಹಿಸಿಲ್ಲ. ಜೆಡಿಎಸ್, ಬಿಜೆಪಿಯೂ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಈ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ, ಪರ್ಯಾಯ ರಾಜಕಾರಣವನ್ನು ಹಟ್ಟುಹಾಕುವ ನಿಟ್ಟಿನಲ್ಲಿ ಮಾರ್ಚ 27ರ ಸಭೆ ಮಹತ್ವದಾಗಿದೆ ಎಂದರು.
ಕನ್ನಡ ನಾಡಿನಲ್ಲಿಯೇ ಕನ್ನಡಿಗರು ಒಂದೆಡೆ ಮರಾಠಿ,ಮತ್ತೊಂದು ಕಡೆ ತಮಿಳು, ತೆಲುಗು ಭಾಷಿಕರಿಗೆ ಹೆದರಿ ಜೀವನ ನಡೆಸಬೇಕಾದ ಪರಿಸ್ಥಿತಿಯನ್ನು ನಮ್ಮ ರಾಜಕಾರಣಿಗಳು ಸೃಷ್ಟಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್ಲಾ ರಾಜಕೀಯ ಪಕ್ಷಗಳು ಉತ್ತರ ಭಾರತೀಯರ ಕೈಗೊಂಬೆಯಂತೆ ವರ್ತಿಸುತ್ತಿರುವುದು ಎಂದರು. ಹಾಗಾಗಿ ನಮ್ಮದೇ ನೆಲದ ಪ್ರಭಲ ಪರ್ಯಾಯ ರಾಜಕೀಯ ಪಕ್ಷವೊಂದರ ಅನಿವಾರ್ಯ ಇದ್ದು, ಇದಕ್ಕಾಗಿ ನವ ಕರ್ನಾಟಕ ನಿರ್ಮಾಣ ಆಂದೋಲನಕ್ಕೆ ರಾಜಕೀಯ ಪಕ್ಷದ ಸ್ವರೂಪ ನೀಡಲು ಮುಂದಾಗಿರುವುದಾಗಿ ಭರತಕುಮಾರ್ ಬೆಲ್ಲದಮಡು ತಿಳಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ್ ಆರಾಧ್ಯ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಎರಡು ವರ್ಷ ಕಳೆದರೂ ಮೈಮರೆತಿದೆ. ಇದರ ಪರಿಣಾಮ ಭೂಮಿಯ ಬೆಲೆ ಎಕರೆಗೆ 25ಲಕ್ಷ ತಲುಪಿದೆ. ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರು ಭೂಮಿ ಕಳೆದುಕೊಂಡಿದ್ದಾರೆ ಎಂದರು.
ದಲಿತ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ ತುಮಕೂರಿನ ಟೌನ್‌ಹಾಲ್ ವೃತ್ತದಿಂದ ಕನ್ನಡ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಸಿ,ಪರ್ಯಾಯ ರಾಜಕಾರಣಕ್ಕೆ ಮುನ್ನುಡಿ ಬರೆಯಲಿದ್ದೇವೆ ಎಂದರು.
ಕನ್ನಡ ಪರ ಸಂಘಟನೆಯ ಅರುಣಕುಮಾರ್, ಭೂ ಹೋರಾಟ ಕೃಷ್ಣಮೂರ್ತಿ ಅವರು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ತೋಂಟದಾರಾಧ್ಯ, ಮಲ್ಲಿಕಾರ್ಜುನಯ್ಯ, ಕಲ್ಪನ, ಹನುಮಂತರಾಯಪ್ಪ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.