ಪ್ಲಾಸ್ಟಿಕ್ ಮುಕ್ತವಾಗಲು ಜನರ ಸಹಕಾರ ಅಗತ್ಯ: ಸಚಿವ ಕೆ. ವೆಂಕಟೇಶ್

KannadaprabhaNewsNetwork |  
Published : Feb 12, 2024, 01:34 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು | Kannada Prabha

ಸಾರಾಂಶ

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಅರಣ್ಯ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಅರಣ್ಯ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ತಿಳಿಸಿದರು.ಹನೂರು ತಾಲೂಕಿನ ವಡಕೆ ಹಳ್ಳ ಬಳಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ರಾಮಾಪುರ ವಲಯದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ಮಾಡಿರುವ ಚೆಕ್‌ ಪೋಸ್ಟ್‌ಗೆ ಚಾಲನೆ ನೀಡಿ ನಂತರ ಮಾತನಾಡಿದರು. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ವನ್ಯ ಧಾಮದ ಮೂಲಕ ಹಾದು ಹೋಗುವ ರಸ್ತೆಯಲ್ಲಿ ವಾಹನಗಳು ಅತಿ ವೇಗ ನಿಯಂತ್ರಣ ಮಾಡುವುದು ಹಾಗೂ ಪ್ರಾಣಿಗಳಿಗೆ ಆಹಾರ ನೀಡುವುದು ಮತ್ತು ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಅರಣ್ಯ ಪ್ರದೇಶವು ಅನೇಕ ಜೀವ ವೈವಿಧ್ಯತೆಯನ್ನು ಹೊಂದಿದ್ದು ಅನೇಕ ಬಗೆಯ ಪ್ರಾಣಿ ಪಕ್ಷಿ ಸಂಕುಲಗಳನ್ನು ಹೊಂದಿದೆ. ಬೆಟ್ಟಕ್ಕೆ ಬರುವ ಭಕ್ತಾದಿಗಳು ಅರಣ್ಯ ಪ್ರದೇಶದಲ್ಲಿ ಸಾಗುವಾಗ ಪ್ಲಾಸ್ಟಿಕ್ ಬಾಟಲ್ ಮತ್ತು ಕವರ್‌ಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪ್ಲಾಸ್ಟಿಕ್ ಮುಕ್ತ ಮಲೆ ಮಹದೇಶ್ವರ ಬೆಟ್ಟ ನಿರ್ಮಾಣಕ್ಕೆ ಭಕ್ತಾದಿಗಳು ಸಹಕರಿಸಬೇಕು ಎಂದರು.ಜಿಲ್ಲಾಧಿಕಾರಿ ಶಿಲ್ಪನಾಗ್ ಮಾತನಾಡಿ ಬೇಸಿಗೆಯ ಕಾವು ಅರಣ್ಯ ಪ್ರದೇಶವನ್ನು ಆವರಿಸಿದೆ. ನಮ್ಮ ಸುತ್ತಮುತ್ತಲಿನ ಅರಣ್ಯ ಪ್ರದೇಶಕ್ಕೆ ಬೆಂಕಿ ಬೀಳದಂತೆ ಸಾರ್ವಜನಿಕರು ಮತ್ತು ಗ್ರಾಮಸ್ಥರು ನೋಡಿಕೊಳ್ಳಬೇಕು. ನಮ್ಮ ಕರ್ತವ್ಯ ಬೆಂಕಿ ಕಂಡು ಬಂದರೆ ಹತ್ತಿರದ ಅರಣ್ಯ ಇಲಾಖೆಯ ಸಿಬ್ಬಂದಿ ಗಮನಕ್ಕೆ ತನ್ನಿ ಇಲ್ಲವಾದಲ್ಲಿ ಅರಣ್ಯ ಸಹಾಯವಾಣಿ 1926ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿದರು.

ಡಿಸಿಎಫ್‌ ಸಂತೋಷ್ ಕುಮಾರ್, ಎಎಸ್ಪಿ ಉದೇಶ್, ಕೊಳ್ಳೇಗಾಲ ತಹಸೀಲ್ದಾರ್‌ ಮಂಜುಳಾ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ